Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಕೆಲವೇ ಕ್ಷಣಗಳಲ್ಲಿ ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಇಂದು (ಆಗಸ್ಟ್ 14) ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಹಿನ್ನೆಲೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.
ಈಗಾಗಲೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ಅವಾಂತರಗಳನ್ನೇ ಸೃಷ್ಟಿ ಮಾಡಿದ್ದಾನೆ. ಹಾಗೆಯೇ ಇನ್ನೂ ಕೆಲವವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಇನ್ನೂ ಕೆಲವೇ ಕ್ಷಣಗಳಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ದಾವಣಗೆರೆ, ಚಿತ್ರದುರ್ಗ, ಧಾರವಾಡ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 14ರಿಂದ 18ರ ವರೆಗೆ ವ್ಯಾಪಕವಾಗಿ ಭಾರೀ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಹಲವೆಡೆ ಮಾತ್ರ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪೂರ್ವ ಅರಬ್ಬೀ ಸಮುದ್ರದ ಕೇರಳದ ಕರಾವಳಿಯ ತೀರದಲ್ಲಿ ಸರ್ಕ್ಯುಲೇಷನ್ ಇದ್ದು, ಈ ಹಿನ್ನೆಲೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಮಳೆ ಸುರಿಯುವ ಮುನ್ಸೂಚನೆ ನೀಡಿದೆ.
ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಿಗೆ ಆಗಸ್ಟ್ 14 & 15ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಉತ್ತರ ಕನ್ನಡ, ಶಿವಮೊಗ್ಗ, ಮೈಸೂರು, ಮಂಡ್ಯ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.












Click it and Unblock the Notifications