Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಣಟ ಕಡಿಮೆಯಾಗಿದ್ದು, ಇನ್ನೂ ಕೆಲವು ಭಾಗಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಇಂದು (ಆಗಸ್ಟ್‌ 16) ಇನ್ನೂ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಮಾಹಿತಿ ಇಲ್ಲಿದೆ ತಿಳಿಯಿರಿ.

ಈಗಾಗಲೇ ಭಾರೀ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರಗಳೇ ಸೃಷ್ಟಿಯಾಗಿವೆ. ಹಲವೆಡೆ ರಸ್ತೆಗಳ ಮೇಲೆ ಗುಡ್ಡ ಕುಸಿದು ವಾಹನ ಸವಾರರು ಪರದಾಡಿದರೆ, ಇನ್ನೂ ಕೆಲವೆಡೆ ರೈಲು ಹಳಿಗಳ ಮೇಲೆ ಗೊಡ್ಡ ಮಣ್ಣು ಕುಸಿದು ರೈಲುಗಳ ಸಂಚಾರ ರದ್ದಾದ ಘಟನೆಗಳು ನಡೆದಿವೆ.

Karnataka Rains Heavy rainfall forecast in these districts of state in few moments on August 15th

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿ ಅಂತಾರಗಳು ಸೃಷ್ಟಿಯಾದರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಬೀದರ್‌, ಮೈಸೂರು, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಇನ್ನೂ ಇದೀಗ ಇಂದು ಇನ್ನೂ ಕೆಲವೇ ಕ್ಷಣಗಳಲ್ಲಿ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರಿನಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಮತ್ತೊಂದೆಡೆ ದಾವಣಗೆರೆ, ಚಿತ್ರದುರ್ಗ, ತುಮಕೂರು, ಧಾರವಾಡ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

ಮನೆಗಳಿಗೆ ನುಗ್ಗಿದ ಮಳೆಯ ನೀರು: ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಯಲುಸೀಮೆ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಇನ್ನು ಭಾರೀ ಮಳೆಯಿಂದ ಅಜ್ಜಂಪುರ ಪಟ್ಟಣದಲ್ಲಿ ಮನೆಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ. ಪಟ್ಟಣದ ಟಿ.ಹೆಚ್.ರಸ್ತೆಯ ಲೋಕೇಶಪ್ಪ, ಸತ್ಯಣ್ಣ, ಸುವರ್ಣ ಬಾಯಿ ಎಂಬುವರಿಗೆ ಸೇರಿದ ಮನೆಗಳಿಗೆ ಮಳೆಯ ನೀರು ನುಗ್ಗಿದ್ದು, ಮನೆ ಮಾಲೀಕರು ಕಂಗಲಾಗಿ ಹೋಗಿದ್ದಾರೆ. ಇನ್ನು ಮಳೆಯ ನೀರು ಹೊರಹಾಕಲು ಜನರು ಪರದಾಡಿದ್ದಾರೆ.

ಅಷ್ಟೇ ಅಲ್ಲದೆ, ಧಾರವಾಡದಲ್ಲಿ ಹಲವೆಡೆ ಇಂದು ಮಧ್ಯಾಹ್ನ ಸುರಿದ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲೂ ಕೂಡ ಸತತ ಒಂದು ಗಂಟೆಗಳ ಕಾಲ ವರುಣಾರ್ಭಟ ಮುಂದುವರೆದ ಪರಿಣಾಮ ನಗರದ ಹಲವೆಡೆ ರಸ್ತೆಗಳೆಲ್ಲ ಚರಂಡಿಯಂತೆ ಮಾರ್ಪಟ್ಟಿದ್ದು, ಕಾರೊಂದು ನೀರಲ್ಲಿ ಸಿಲುಕಿದ ಘಟನೆ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+