Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆರಾಯ ಆರ್ಭಟ ನಿಲ್ಲಿಸಿದ್ದು, ಇನ್ನೂ ಕೆಲವು ಭಾಗಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಇಂದು (ಆಗಸ್ಟ್‌ 18) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಲಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಮಾಹಿತಿ ಇಲ್ಲಿದೆ ಗಮನಿಸಿ.

ಈಗಾಗಲೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಕೆಲವೆಡೆ ಗುಡ್ಡದ ಮಣ್ಣು ಹೆದ್ದಾರಿಗೆ ಕುಸಿದ್ದು ವಾಹನ ಸವಾರರು ಪರದಾಡಿದ್ದು, ಇನ್ನೂ ಕೆಲವೆಡೆ ರೈಲ್ವೆ ಹಳಿ ಮೇಲೆ ಗುಡ್ಡದ ಮಣ್ಣು ಕುಸಿದು ರೈಲು ಸೇವೆ ರದ್ದದ ಘಟನೆಗಳು ನಡೆದಿವೆ.

Karnataka Rains Heavy rainfall forecast in these districts of state in few moments on August 18th

ಇಂದು ಇನ್ನೂ ಕೆಲವೇ ಕ್ಷಣಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಬೆಳಗಾವಿ, ಧಾರವಾಡ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.

ಭಾರೀ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದರೆ, ಇನ್ನೂ ಕೆಲವೆಡೆ ಡ್ಯಾಂಗಳು ತುಂಬುವ ಹಂತವನ್ನು ತಲುಪಿದ್ದು, ಇದರಿಂದ ರೈತರ ಮುಖದಲ್ಲಿ ನಗು ಮೂಡಿದಂತಾಗಿದೆ. ಆದರೂ ಕೆಲವೆಡೆ ಅತೀವೃಷ್ಟಿಯಿಂದ ಬೆಳೆಗಳೆಲ್ಲ ಜಲಾವೃತವಾಗಿ ಅನ್ನದಾತರು ಕಂಗಾಲಾದ ಘಟನೆಗಳು ನಡೆದಿವೆ.

ಕಳೆದ ವರ್ಷ ಅಂದರೆ 2023ರಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ನದಿ, ಕೆರೆ-ಕಟ್ಟೆಗಳು ಜೊತೆಗೆ ಜಲಾಶಯಗಳು ಕೂಡ ಬತ್ತಿಹೋಗುವ ಹಂತವನ್ನು ತಲುಪಿದ್ದವು. ಆದರೆ, ಈ ಬಾರಿ ಅಂದರೆ 2024ರ ಜೂನ್‌ ಆರಂಭ ಆಗುತ್ತಿದ್ದಂತೆ ಮುಂಗಾರು ಚುರುಕು ಪಡೆದ ಪರಿಣಾಮ ಬಹುತೇಕ ಜಲಾಮೂಲಗಳು ತುಂಬಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಅಲ್ಲದೆ, ಮತ್ತೊಂದೆಡೆ ಸೋಮವಾರದಿಂದ ಇಡೀ ಒಂದು ವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಮತ್ತೆ ಆರ್ಭಟ ಶುರು ಮಾಡಲಿದ್ದಾರೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+