Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ತಗ್ಗಿದ್ದಿ, ಇನ್ನೂ ಕೆಲವು ಭಾಗಗಳಲ್ಲಿ ಮಾತ್ರ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಇಂದು (ಆಗಸ್ಟ್‌ 19) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಮಾಹಿತಿ ಇಲ್ಲಿದೆ ನೋಡಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 19) ಮಧ್ಯಾಹ್ನ ಮಳೆರಾಯ ಆರ್ಭಟಿಸಿದ್ದು, ಹಲವೆಡೆ ರಸ್ತೆಗಳು ಕೆರೆಯಂತಾಗಿ ಮಾರ್ಪಟ್ಟು ವಾಹನ ಸವಾರರು ಪರದಾಡಿದ ಘಟನೆಗಳು ನಡೆದಿವೆ. ಹಾಗೆಯೇ ನಗರದಲ್ಲಿ ಇನ್ನೂ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.

Karnataka Rains Heavy rainfall forecast in these districts of state in few moments on August 19th

ಇಂದು ಇನ್ನೂ ಕೆಲವೇ ಕ್ಷಣಗಳಲ್ಲಿ, ಮೈಸೂರು, ಮಂಡ್ಯ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದ್ದು, ಹಾಸನ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಬೆಳಗಾವಿ, ಧಾವರವಾಡ, ಬೀದರ್‌ ಭಾಗಗಳಲ್ಲಿ ಸಾಧಾರಣ ಮಳೆ ಸುರಿಯುವ ಮುನ್ಸೂಚನೆ ಇದೆ.

ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಬೆಳಗಾವಿ ಭಾಗಗಳಲ್ಲಿ ಭಾರೀ ಮಳೆಯಿಂದ ದೊಡ್ಡ ದೊಡ್ಡ ಅಂತಾರಗಳೇ ಸೃಷ್ಟಿಯಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಭಾಗದ ಹಲವೆಡೆ ಭಾರೀ ಮಳೆಯಿಂದ ಡ್ಯಾಂಗಳು ತುಂಬಿದ್ದು, ಹೆಚ್ಚಾದ ನೀರನ್ನು ನದಿಗಳಿಗೆ ಹರಿಸಲಾಗಿತ್ತು. ಇದರಿಂದ ನದಿಗಳು ಅಪಾಯದ ಮಟ್ಟದಲ್ಲಿ ಹರಿದ ಪರಿಣಾಮ ಅವಾಂತರಗಳೇ ಸೃಷ್ಟಿಯಾಗಿವೆ.

ಕಳೆದ ವರ್ಷ ಅಂದರೆ 2023ರಲ್ಲಿ ಮಳೆಯಿಲ್ಲದೇ, ಅನಾವೃಷ್ಟಿಯಿಂದ ಕೃಷಿ ಬೆಳಗಳೆಲ್ಲ ಸೂರ್ಯನ ಶಾಖಕ್ಕೆ ಕಮರಿ ಇದರಿಂದ ಅನ್ನದಾತರು ಕಂಗೆಟ್ಟು ಹೋಗಿದ್ದರು. ಇನ್ನೂ ಈ ಬಾರಿ 2024ರ ಜೂನ್‌ ಆರಂಭದಿಂದಲೂ ಮುಂಗಾರು ಚುರುಕು ಪಡೆದು ಹಲವೆಡೆ ಅವಾಂತರಗಳೇ ಸೃಷ್ಟಿಯಾಗಿದ್ದು, ಅತೀವೃಷ್ಟಿಯಾಗಿದೆ. ಅಂದರೆ ಬೆಳೆಗಳೆಲ್ಲ ನೀರುಪಾಲಾಗಿದ್ದು, ಅನ್ನದಾತರು ಕಣ್ಣೀರಿಡುತ್ತಿದ್ದಾರೆ.

ಭಾರೀ ಮಳೆಯಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು, ಇನ್ನೂ ಕೆಲವು ಡ್ಯಾಂಗಳು ತುಂಬುವ ಹಂತವನ್ನು ತಲುಪಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

7 ದಿನಗಳ ಕಾಲ ಭಾರೀ ಮಳೆ: ಇನ್ನು ಉತ್ತರ ಪ್ರದೇಶ ಸೇರಿದಂತೆ ವಾಯುವ್ಯ ರಾಜ್ಯಗಳಲ್ಲಿ ಮುಂದಿನ 5ರಿಂದ 7 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಈ ವಾರ ಜಮ್ಮು-ಕಾಶ್ಮೀರ, ಲಡಾಖ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಹರಿಯಾಣ, ಚಂಡೀಗಢ, ನವದೆಹಲಿ ಮತ್ತು ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ನವದೆಹಲಿ ಹವಾಮಾನದ ವಿವರ: ಇಂದು ನವದೆಹಲಿಯ ಹಲವೆಡೆ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಮಳೆ ಸುರಿದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಇಂದು ಇಲ್ಲಿ ಗರಿಷ್ಠ ತಾಪಮಾನ ಸುಮಾರು 35 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ ಸುಮಾರು 27 ಡಿಗ್ರಿ ಸೆಲ್ಸಿಯಸ್ ದಾಖಲು ಆಗಿದೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳ, ನಾಗಾಲ್ಯಾಂಡ್, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈ ಹಿನ್ನೆಲೆ ಈ ಭಾಗಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಆಗಸ್ಟ್ 21ರವರೆಗೆ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದದಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+