Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಭಾಗಗಳಲ್ಲಿ ಸುರಿಯಲಿದೆ ಭಾರೀ ಮಳೆ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆರಾಯನ ತಗ್ಗಿದ್ದು, ಕೆಲವು ಜಿಲ್ಲೆಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆತ್ತಿದ್ದಾನೆ. ಹಾಗೆಯೇ ಇಂದು (ಆಗಸ್ಟ್ 21) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಮಾಹಿತಿ ಇಲ್ಲಿದೆ ಗಮನಿಸಿ.
ಇದೀಗ ರಾಜಧಾನಿಯಲ್ಲಿ ಮಳೆ ಚುರುಕು ಪಡೆದಿದೆ. ಬೆಳಗ್ಗೆ ವೇಳೆ ಬಿಸಿಲಿನ ವಾತಾವರಣ ಇದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ, ರಾತ್ರಿಯಾಗುತ್ತಿದ್ದಂತೆ ಅಬ್ಬರದ ಮಳೆ ಮುಂದುವರೆಯುತ್ತಿದೆ. ಹಾಗೆಯೇ ಇಂದು ಇನ್ನೂ ಕೆಲವೇ ಕ್ಷಣಗಳಲ್ಲಿ ನಗರದಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಮಳೆರಾಯ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಇನ್ನು ದಾವಣಗೆರೆ, ತುಮಕೂರು, ಧಾರವಾಡ, ಹುಬ್ಬಳ್ಳಿ, ಬೀದರ್, ಬಾಗಲಕೋಟೆ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಿದೆ.
ಇನ್ನು ಇಂದು ಕೆಲವೇ ಕ್ಷಣಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಬೀದರ್ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.
ಮನೆಗಳು ಜಲಾವೃತ: ಇದೀಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮತ್ತೆ ಚುರುಕು ಪಡೆದಿದೆ. ಹಾಗೆಯೇ ಚಿತ್ರದುರ್ಗ ಜಿಲ್ಲೆಯಾದ್ಯಂತ ಮಳೆರಾಯನ ಆರ್ಭಟ ಮುಂದುವರೆದಿದ್ದು, ಮಂಗಳವಾರ ರಾತ್ರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಮತ್ತೊಂದು ಕಡೆ ಚಳ್ಳಕೆರೆ ನಗರದ ರಹೀಂ ನಗರದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಇತ್ತ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯಕ್ಕೆ ಒಳಹರಿವಿನಲ್ಲಿ ಪ್ರಮಾಣ ಕಡಿಮೆಯಾಗಿದೆ. ಇಂದಿನ ವರದಿಯಲ್ಲಿ 693 ಕ್ಯೂಸೆಕ್ ಒಳಹರಿವು ಇದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 117.20 ಅಡಿ ತಲುಪಿದೆ.
ಮನೆಗಳಿಗೆ ನುಗ್ಗಿದ ನೀರು: ಸಂಜೆಯಿಂದ ಆರಂಭಗೊಂಡ ಮಳೆರಾಯ ಗುಡುಗು-ಮಿಂಚು ಸಹಿತ ಧಾರಕಾರ ಮಳೆ ಸುರಿಯಿತು. ಚಳ್ಳಕೆರೆ ನಗರದಲ್ಲಿ ರಹಿಂ ನಗರ ಜಲಾವೃತವಾಗಿದೆ. ಇದರಿಂದ ಜನ ಜೀವನ ಅಸ್ತವ್ಯಸ್ಥವಾಗಿದೆ. ಇನ್ನು ಮನೆಗಳಿಗೆ ನೀರು ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ನೀರು ಪಾಲಾಗಿವೆ ಎಂದು ತಿಳಿದುಬಂದಿದೆ.
50ಕ್ಕೂ ಹೆಚ್ಚು ಮನೆಗಳು ಮಳೆಯ ನೀರಿನಿಂದ ಜಲಾವೃತವಾಗಿದೆ. ಜೆಸಿಬಿ ಯಂತ್ರಗಳ ಮೂಲಕ ಚರಂಡಿಗೆ ಮಳೆ ನೀರು ಹರಿಸಲು ಪ್ರಯತ್ನ ಮಾಡಲಾಗಿದೆ. ಚಳ್ಳಕೆರೆ ತಾಲೂಕಿನ ಕೋಡಿಹಳ್ಳಿ ಸಮೀಪ ಮಳೆಯ ನೀರಿನ ರಭಸಕ್ಕೆ ಕಾಪೌಂಡ್ ಗೋಡೆ ಕೊಚ್ಚಿ ಹೋಗಿದೆ.
ಅಲ್ಲದೆ ಮೊಳಕಾಲ್ಮೂರು, ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕಿನಲ್ಲೂ ಹೆಚ್ಚು ಮಳೆಯಾಗಿದೆ. ಸಣ್ಣ ಪುಟ್ಟ ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿವೆ. ಒಟ್ಟಾರೆಯಾಗಿ ಬರದನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ರೈತ ಸಮುದಾಯದಲ್ಲಿ ಮಂದಹಾಸ ಮೂಡಿದಂತಾಗಿದೆ.












Click it and Unblock the Notifications