Karnataka Rains: ಕೆಲವೇ ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದಲ್ಲಿ ಇದೀಗ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಇಂದು (ಆಗಸ್ಟ್ 29) ಇನ್ನೂ ಕೆಲವೇ ಗಂಟೆಗಳಲ್ಲಿ ಈ ಭಾಗಗಲ್ಲಿ ಮಾತ್ರ ಗುಡುಗು ಸಹಿತ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಎಂದು ಇಲ್ಲಿ ತಿಳಿಯಿರಿ.

ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ ರೈತರು ಬೆಳೆದ ಬೆಳೆಗಳೆಲ್ಲ ಸೂರ್ಯನ ಶಾಖಕ್ಕೆ ಸುಟ್ಟುಹೋಗಿದ್ದವು. ಇನ್ನೂ ಈ ಬಾರಿ 2024ರ ಜೂನ್‌ ಆರಂಭ ಆಗುತ್ತಿದ್ದಂತೆ ಮುಂಗಾರು ಮಳೆ ಎಂಟ್ರಿ ಕೊಟ್ಟು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವೆಡೆ ಅವಾಂತರಗಳು ಸೃಷ್ಟಿ ಆಗಿರುವ ಘಟನೆಗಳು ನಡೆದಿವೆ.

Karnataka Rains Heavy rainfall forecast in these districts of state in few moments on August 29th

ಅತೀವೃಷ್ಟಿಯಿಂದ ಹಲವು ಜಿಲ್ಲೆಗಳಲ್ಲಿ ರೈತರ ಬೆಳೆಗಳು ಮಳೆ ನೀರಿನಲ್ಲಿ ಕೊಚ್ಚಿ ಹೋದ ಘಟನೆಗಳು ನಡೆದಿವೆ. ಮತ್ತೊಂದೆಡೆ ನೋಡುವುದಾದರೆ, ಕಳೆದ ಬಾರಿ ಮಳೆ ಇಲ್ಲದೆ, ಬತ್ತಿಹೋಗುವ ಹಂತ ತಲುಪಿದ್ದ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳು ತುಂಬಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

ಇಂದು ಇನ್ನೂ ಕಲವೇ ಕ್ಷಣಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದ್ದು, ಗಾಳಿಯ ವೇಗವು ಕೂಡ ಹೆಚ್ಚಿರಲಿದೆ ಎನ್ನುವ ಮುನ್ಸೂಚನೆ ಇದೆ.

ಅಷ್ಟೇ ಅಲ್ಲದೆ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ವಿಜಯಪುರ, ಧಾರವಾಡ, ಕಲಬುರಗಿ, ಯಾದಗಿರಿ, ಬೆಳಗಾವಿ, ಧಾರವಾಡ, ಚಿತ್ರದುರ್ಗ, ತುಮಕೂರು, ಮಂಡ್ಯ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+