Karnataka Rains: ಕೆಲವೇ ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಕೆಲವೇ ಭಾಗಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಇಂದು (ಆಗಸ್ಟ್ 30) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇನ್ನೂ ಕೆಲವೇ ಕ್ಷಣಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಹಾಗೆಯೇ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಬೀದರ್, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.
ಎಲ್ಲೆಲ್ಲಿ ಭಾರೀ ಮಳೆ?: ಮುಂದಿನ ಹಲವು ದಿನಗಳ ಕಾಲ ದೇಶಾದ್ಯಂತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಗುಜಾರಾತ್‌ನ ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಹಾಗೆಯೇ ಕೇರಳ, ಒಡಿಶಾ, ಕರಾವಳಿ ಕರ್ನಾಟಕ, ತೆಲಂಗಾಣ, ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಆರೆಂಜ್ ಅಲರ್ಟ್ ಘೋಷಣೆ: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಗುಜಾರಾತ್‌ನ ಕಚ್, ಸೌರಾಷ್ಟ್ರ ಸೇರಿ ತೆಲಂಗಾಣ, ಕರಾವಳಿ ಆಂಧ್ರಪ್ರದೇಶ, ಕೇರಳ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಸೆಪ್ಟೆಂಬರ್ 2ರಂದು ನವದೆಹಲಿ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಗಿಲ್ಗಿಟ್, ಬಾಲ್ಟಿಸ್ತಾನ್, ಹರಿಯಾಣ, ಚಂಡೀಗಢ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.












Click it and Unblock the Notifications