Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ-ಎಲ್ಲೆಲ್ಲಿ? ಇಲ್ಲಿದೆ ಮಾಹಿತಿ
Karnataka Rains: ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಕೆಲವು ಜಿಲ್ಲೆಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಹಾಗೆಯೇ ಇಂದು (ಆಗಸ್ಟ್ 31) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುವು ನೀಡಿ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ. ಹಾಗೆಯೇ ಇನ್ನೂ ಕಲವೇ ಕ್ಷಣಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಹಲವು ಜಿಲ್ಲೆಗಳಲ್ಲಿ ಇದೇ ವಾತಾವರಣ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಈಗಾಗಲೇ ಮಳೆರಾಯ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಕೆಲವೆಡೆ ಗುಡ್ಡ ಕುಸಿದು ರಸ್ತೆಗಳು ಬಂದ್ ಆಗಿದ್ದರೆ, ಇನ್ನೂ ಕೆಲವೆಡೆ ಗುಡ್ಡದ ಮಣ್ಣು ರೈಲ್ವೆ ಹಳಿಗಳ ಮೇಲೆ ಕುಸಿದು ರೈಲು ಸಂಚಾರ ರದ್ದಾದ ಘಟನೆಗಳು ಕೂಡ ನಡೆದಿದ್ದವು. ಇದೀಗ ಮತ್ತೆ ರಾಜ್ಯದ ಹಲವೆಡೆ ಮಳೆ ಚುರುಕು ಪಡೆದಿದೆ.
ಇನ್ನೂ ಕೆಲವೇ ಕ್ಷಣಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 35-45 ಕಿಮೀ ವೇಗದಲ್ಲಿ ಬೀಸಲಿದೆ. ಮತ್ತೊಂದೆಡೆ ಬೆಳಗಾವಿ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೀದರ್, ಕಲಬುರಗಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸುರಿಯುವ ಮುನ್ಸೂಚನೆ ಇದೆ.
ಎಲ್ಲೆಲ್ಲಿ ಭಾರೀ ಮಳೆ: ಸೆಪ್ಟೆಂಬರ್ 1-2 ಛತ್ತೀಸ್‌ಗಢ, ಸೆಪ್ಟೆಂಬರ್ 2ರಂದು ಪೂರ್ವ ಮಧ್ಯಪ್ರದೇಶ, 2-4 ರ ವರೆಗೆ ಗುಜರಾತ್, ಸೆಪ್ಟೆಂಬರ್ 3 ರಂದು ಮಧ್ಯಪ್ರದೇಶದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಸೆಪ್ಟೆಂಬರ್ 1-5ರ ವರೆಗೆ ಕೊಂಕಣ ಮತ್ತು ಗೋವಾ, ಸೆಪ್ಟೆಂಬರ್ 1-3ರ ವರೆಗೆ ಮರಾಠವಾಡ ಮತ್ತು ಸೆಪ್ಟೆಂಬರ್ 2-4ರ ವರೆಗೆ ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಪ್ರತ್ಯೇಕವಾಗಿ ಭಾರೀ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.
ಇಂದು (ಆಗಸ್ಟ್ 31) ಒಡಿಶಾದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 1ರ ವರೆಗೆ ರಾಜ್ಯದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 3ರ ವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಭಾರತದಲ್ಲಿ, ಕರಾವಳಿ ಆಂಧ್ರಪ್ರದೇಶ, ಕರಾವಳಿ ಕರ್ನಾಟಕ, ತೆಲಂಗಾಣದಲ್ಲಿ ಸೆಪ್ಟೆಂಬರ್ 2ರ ಇದೇ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.












Click it and Unblock the Notifications