Karntaka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಮುನ್ಸೂಚನೆ
Karntaka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯಿಂದ ಅವಾಂತರಗಳೇ ಸೃಷ್ಟಿಯಾಗಿವೆ. ಮಲೆನಾಡು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ರಸ್ತೆ ಮೇಲೆ ಗುಡ್ಡ ಕುಸಿತವಾಗಿ ಮಣ್ಣು ಸುರಿದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಹಾಗೆಯೇ ಇಂದು (ಆಗಸ್ಟ್ 06) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯಿದೆ.
ಈಗಾಗಲೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಉಡುಪಿ, ಕೊಡಗು, ಹಾಸನ, ಬೆಳಗಾವಿ ಸೇರಿದಂತೆ ಹಲವೆಡೆ ಮಳೆರಾಯನ ಅಬ್ಬರಿಸಿ ಬೊಬ್ಬೆರೆದ ಪರಿಣಾಮ ಅವಾಂತರಗಳೇ ಸೃಷ್ಟಿಯಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಇದೀಗ ಪ್ರವಾಹದ ವಾತಾವರಣ ನಿರ್ಮಾಣವಾಗಿದ್ದು, ಈ ಭಾಗದ ಜನರು ಜೀವವನ್ನು ಕೈಯಲ್ಲಿಡಿದು ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನೂ ಕೆಲವೇ ಕ್ಷಣಗಳಲ್ಲಿ ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆತಯಾಗುವ ಸಾಧ್ಯತೆಯಿದೆ. ಗುರ್ಬರ್ಗ, ಯಾದಗಿರಿ, ಕಲಬುರಗಿ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಧಾರವಾಡ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.
ಟ್ಯೂಬ್ ಅನ್ನೇ ದೋಣಿ ಮಾಡಿಕೊಂಡ ಜನ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಮಳೆರಾಯನ ಆರ್ಭಟ ತಗ್ಗಿದ್ದು, ಇನ್ನು ಕೆಲವು ಜಿಲ್ಲೆಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಅದರಲ್ಲೂ ಬೆಳಗಾವಿ ಭಾಗದಲ್ಲಿ ಮಳೆ ಮುಂದುವರೆದ ಹಿನ್ನೆಲೆ ಪ್ರವಾಹದಂತಹ ವಾತಾವರಣ ನಿರ್ಮಾಣವಾಗಿದೆ. ಹಾಗಾದರೆ ಏನೆಲ್ಲ ಅನಾಹುತಗಳು ಸಂಭವಿಸಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಸುರಿಯುತ್ತಿರುವ ಹಿನ್ನೆಲೆ ಕೆರೆ, ಹಳ್ಳ-ಕೊಳ್ಳ, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಜಿಲ್ಲೆಯ ನಿಂಗಾಪುರ ಗ್ರಾಮಕ್ಕೆ ಹೊಂದಿಕೊಂಡಿರುವ ಹುಲಿಕೆರೆ ಹಿನ್ನೀರಿನಲ್ಲಿ ಗಾಳಿ ತುಂಬಿದ ಟ್ಯೂಬ್ ಮೂಲಕವೇ ವಿದ್ಯಾರ್ಥಿಗಳು ಶಾಲೆಗೆ ತೆರಳುವ ಪರಿಸ್ಥಿತಿ ಎದುರಾಗಿದೆ. ಮಳೆ ಬಂತೆದಂರೆ ಸಾಕು ಯಾವುದೇ ಪರ್ಯಾಯ ದಾರಿಯಿಲ್ಲದೆ, ಕಲಿಕೆಗಾಗಿ ಈ ಹಿನ್ನೀರನ್ನೂ ದಾಟಿಕೊಂಡೇ ಹೋಗುತ್ತಿದ್ದೇವೆ ಎಂದು ಮಕ್ಕಳು ಅಳಲು ತೋಡಿಕೊಂಡಿದ್ದಾರೆ.
ವಿದ್ಯಾರ್ಥಿಗಳು ಜೀವವನ್ನು ಅಂಗೈಯಲ್ಲಿಡಿದು ಗಾಳಿ ತುಂಬಿದ ಟ್ಯೂಬೇ ಅನ್ನೇ ಬಳಸಿಕೊಂಡು ಕೆರೆ ಹಿನ್ನೀರು ದಾಟಿ ಶಾಲೆಗೆ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಈ ದೃಶ್ಯ ನೋಡಿದರೆ, ಎಂಥಹವರ ಎದೆ ಝೆಲ್ ಎನಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.
ಗಾಳಿ ತುಂಬಿದ ಟ್ಯೂಬ್‌ಗೆ ಹಗ್ಗ ಕಟ್ಟಿ ಎಳೆದು ಮಕ್ಕಳನ್ನು ಈ ಕೆರೆಯನ್ನು ಪ್ರತಿನಿತ್ಯ ದಾಟಿಸುತ್ತಿದ್ದು, ಇದು ಸ್ವಲ್ಪ ಆಯ ತಪ್ಪಿದರೂ ಸಹ ಮಕ್ಕಳು ಕೆರೆ ಪಾಲಾಗುವ ಭೀತಿಯಲ್ಲಿ ಪೋಷಕರು ಇದ್ದಾರೆ. ಈಗಾಗಲೇ ಈ ಭಾಗದಲ್ಲಿ ಸೇತುವೆ ನಿರ್ಮಾಣ ಮಾಡಿ ಕೊಡಿ ಎಂದು 20 ವರ್ಷಗಳಿಂದಲೂ ಅಧಿಕಾರಿಗಳನ್ನು ಕೇಳಿಕೊಳ್ಳುತ್ತಲೇ ಇದ್ದೇವೆ. ಆದರೆ, ಅಧಿಕಾರಿಗಳು ಮಾತ್ರ ಕ್ಯಾರೆ ಅನ್ನುತ್ತಿಲ್ಲ ಎನ್ನುವುದು ಸ್ಥಳೀಯರ ಆರೋಪವಾಗಿದೆ. ಆದ್ದರಿಂದ ರಬ್ಬರ್ ಟ್ಯೂಬ್ ಅನ್ನೇ ಇವರು ಬೋಟ್, ಹಿನ್ನೀರು ದಾಟಿಸುವ ದೋಣಿಯಾಗಿ ಮಾಡಿಕೊಂಡಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಈ ಭಾಗದ ಶಾಲಾ ಮಕ್ಕಳಿಗೆ ಅನುಕೂಲ ಆಗುವಂತೆ ಸೇತುವೆ ನೀರ್ಮಾಣ ಮಾಡಿಕೊಡಿ ಎನ್ನುವುದು ಇಲ್ಲಿನ ಸ್ಥಳೀಯರ ಆಗ್ರಹವಾಗಿದೆ.












Click it and Unblock the Notifications