Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ಇದೀಗ ರಣಭೀಕರ ಚಳಿ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಇನ್ನು ಇಂದು (ಡಿಸೆಂಬರ್ 27) ಇನ್ನೂ ಕೆಲವೇ ಕ್ಷಣಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇದ್ದು, 10 ಗಂಟೆಯಾಗುತ್ತಿದ್ದಂತೆ ಸೂರ್ಯದೇವ ಎಂಟ್ರಿ ಕೊಟ್ಟಿದ್ದಾನೆ. ಕೆಲವೆಡೆ ಮೋಡ ಕವಿದಿದ್ದು, ಇನ್ನೂ ಕೆಲವೇ ಕ್ಷಣಗಳಲ್ಲಿ ನಗರದ ಹಲವೆಡ ಮಳೆಯಾಗುವ ಮುನ್ಸೂಚನೆ ಇದೆ. ನಿನ್ನೆ (ಡಿಸೆಂಬರ್ 26) ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಿದೆ. ಹಾಗೆಯೇ ಇಂದು ಕೂಡ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

Karnataka Rains Heavy rainfall forecast in these districts of state in few moments on December 27

ಈ ದಿನದ ಮಳೆ ಭವಿಷ್ಯ: ಇಂದು ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ರಾಜ್ಯ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ 21 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತ್ರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಇನ್ನು ಜೂನ್‌ ಆರಂಭವಾಗುತ್ತಿದ್ದಂತೆ ಕರ್ನಾಟಕಕ್ಕೆ ಭರ್ಜರಿಯಾಗಿ ಎಂಟ್ರಿ ಕೊಟ್ಟು ದೊಡ್ಡ ಅವಾತಂರಗಳನ್ನೇ ಸೃಷ್ಟಿಸಿತ್ತು. ಈ ವೇಳೆ ಸುರಿದ ಭಾರೀ ಮಳೆಯಿಂದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳೆಲ್ಲ ಭರ್ತಿಯಾಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಕೂಡ ಮೂಡಿದಂತಾಗಿದೆ. ಮತ್ತೊಂದೆಡೆ ಹಲವೆಡೆ ಅತೀವೃಷ್ಠಿಯಿಂದಾಗಿ ಬೆಳೆಗಳೆಲ್ಲ ನಾಶವಾದ ಘಟನೆಗಳು ಕೂಡ ನಡೆದಿವೆ.

ಮತ್ತೊಂದೆಡೆ ಮಳೆರಾಯ ಬರವನ್ನೆಲ್ಲ ನೀಗಿಸಿದನಲ್ಲ ಅಷ್ಟು ಸಾಕು. ಆದರೆ ನಷ್ಟ ಪರಿಹಾರದ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಈ ಬಾರಿ ಭಾರೀ ಮಳೆಯಿಂದ ಉತ್ತಮ ಬೆಳೆಗಳೇನೋ ಬಂದಿವೆ. ಆದರೆ, ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಕಾಟದಿಂದ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲ ಎಂದು ರೈತರು ಅಳಲು ತೋಡಿಕೊಳ್ಳುತ್ತಲೇ ಇದ್ದಾರೆ. ಇದಕ್ಕೂ ಕೂಡ ಸರ್ಕಾರವೇ ಸೂಕ್ತ ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕಂತಲೂ ಕೂಡ ರೈತರು ಆಗ್ರಹಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+