Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಣಬಿಸಿಲು ಮುಂದುವರೆದಿದ್ದು, ಜನ ಬೇಸತ್ತು ಹೋಗಿದ್ದಾರೆ. ಈ ನಡುವೆಯೇ ಹಲವೆಡೆ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ಹಾಗೆಯೇ ಇಂದು (ಮಾರ್ಚ್ 16) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮಾರ್ಚ್ 16) ಬೆಳಗ್ಗೆ ಮೋಡ ಕವಿದ ವಾತಾರಣ ಇದ್ದು, 8 ಗಂಟೆ ಮೇಲೆ ಬಿಸಿಲು ಮುಂದುವರೆದಿದೆ. ಮತ್ತೆ ಸಂಜೆ ವೇಳೆ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದ್ದು, ಇನ್ನೂ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Rains Heavy rainfall forecast in these districts of state in few moments on March 16

ಇಂದು ರಾಜ್ಯದ ಉತ್ತರ ಒಳನಾಡಿನ ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ತಾಪಮಾನ ಹೆಚ್ಚು ದಾಖಲಾಗುವ ಮುನ್ಸೂಚನೆ ಇದ್ದು, ಈ ಹಿನ್ನೆಲೆ ಈ ಭಾಗಗಳಿಗೆ ಮುಂಜಾಗ್ರತಾ ಕ್ರಮಹವಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಬೀದರ್, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಇನ್ನುಳಿದಂತೆ ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

ನಿನ್ನೆ ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆ, ಬೆಂಗಳೂರು ನಗರ, ಬೀದರ್, ವಿಜಯಪುರ, ಧಾರವಾಡ, ಗದಗ, ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿದೆ ಎಂದು ತಿಳಿದುಬಂದಿದೆ.

ಎಚ್ಎಎಲ್ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ನಡುವೆಯ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟಿಸಿ ಭೂಮಿಯನ್ನು ತಂಪಾಗಿಸಿದೆ. ಕೊಡಗು, ದಕ್ಷಿಣ ಕನ್ನಡ, ಚಾಮರಾಜನಗರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಸೇರಿದಂತೆ ಹಕವೆಡೆ ಮಳೆಯಾಗಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟಿಸಲಿದ್ದು, ಉಳಿದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+