Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ದ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ಬತ್ತಿಹೋಗುವ ಹಂತ ತಲುಪಿದ್ದ ಕೆರೆ-ಕಟ್ಟೆಗಳು, ನದಿಗಳು, ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ. ಇನ್ನು ಇದೀಗ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ.
ಇಂದು (ನವೆಂಬರ್ 11) ಇನ್ನೂ ಕೆಲವೇ ಕ್ಷಣಗಳಲ್ಲಿ ಚಳಿಯ ನಡುವೆಯೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂನೆ ಇದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಚಳಿಯ ವಾತಾವರಣ ಇದ್ದು, ಮಧ್ಯಾಹ್ನದಿಂದ ಸಂಜೆವರೆಗೂ ಬಿಸಿಲಿನ ವಾತಾವರಣ ಮುಂದುವರೆದಿತ್ತು. ಬಳಿಕ ಮತ್ತೆ ಚಳಿ, ಮಂಜಿನ ವಾತಾವರಣ ನಿರ್ಮಾಣವಾಗಿದ್ದು, ಇನ್ನೂ ಕೆಲವೇ ಕ್ಷಣಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಹಾವೇರಿ, ಗದಗ, ಬೀದರ್, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರಿಸಿ ಬೊಬ್ಬೆರೆದಿದ್ದಾನೆ.
ಪರಿಣಾಮ ಬಹುತೇಕ ಜಿಲ್ಲೆಗಳಲ್ಲಿ ಬತ್ತಿ ಹೋಗುವ ಹಂತ ತಲುಪಿದ್ದ ಜಲಮೂಗಳು ಭರ್ತಿಯಾಗಿದ್ದು, ಇದರಿಂದ ಅನ್ನದಾತನ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಇನ್ನೂ ಇದೀಗ ಚಳಿಯ ನಡುವೆಯೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ನೀಡಿದೆ.












Click it and Unblock the Notifications