Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Karnataka Rains: ಈಗಾಗಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲ ಆರಂಭವಾಗಿದ್ದು, ಇದರ ನಡುವೆಯೇ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಇಂದು (ನವೆಂಬರ್ 13) ಇನ್ನೂ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದವರೆಗೂ ಮೋಡ ಕವಿದ ವಾತಾವರಣ ಇದ್ದು, ಬಳಿಕ ಬಿಸಿಲು ಮುಂದುವರೆದಿದ್ದು, ಸಂಜೆ ಬಳಿಕ ಮಂಜು ಕವಿದ ವಾತಾವರಣ ನಿರ್ಮಾಣವಾಗಿದೆ. ಇದರ ನಡುವೆಯೇ ನಗರದಲ್ಲಿ ಇನ್ನೂ ಕೆಲವೇ ಕ್ಷಣಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಇನ್ನೂ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಈಗಾಗಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಬೆಳಗಾವಿ, ಬಾಗಲಕೋಟೆ, ಗದಗ, ಬೀದರ್, ಹಾವೇರಿ, ಕಲಬುರಗಿ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ಧಾರವಾಡ, ಹುಬ್ಬಳ್ಳಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.
ಇನ್ನು ಇದೀಗ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ರಾಜ್ಯದ ದಕ್ಷಿಣ ಭಾಗದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವೇ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಈ ಭಾರೀ ಮುಂಗಾರು ಮಳೆ ಆರ್ಭಟಿಸಿದ ಹಿನ್ನೆಲೆ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ಜಲಾಶಯಗಳು ಭರ್ತಿಯಾಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಕೆಆರ್‌ಎಸ್, ಕಬಿನಿ, ಹೇಮಾವತಿ, ಹಾರಂಗಿ, ತುಂಗಭದ್ರಾ, ಭದ್ರಾ, ಆಲಮಟ್ಟಿ, ಘಟಪ್ರಭಾ ಸೇರಿದಂತೆ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳು ಈ ಬಾರಿ ಭರ್ತಿಯಾಗಿವೆ.
ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ಬತ್ತಿಹೋಗುವ ಹಂತವನ್ನು ತಲುಪಿದ್ದವು. ಮತ್ತೊಂದೆಡೆ ಅನ್ನದಾತರು ಬೆಳೆದ ಬೆಳಗಳೆಲ್ಲವೂ ಸೂರ್ಯನ ಶಾಖಕ್ಕೆ ಮುದುಡಿ ಹೋಗಿದ್ದು, ಅನ್ನದಾತ ಕಂಗಾಲಾಗಿದ್ದ.
ಆದರೆ, ಈ ಬಾರಿ ಅಂದರೆ, 2024ರ ಜೂನ್ ಆರಂಭವಾಗುತ್ತಿದ್ದಂತೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಇದರಿಂದ ಬಹುತೇಕ ಜಲಾಮೂಗಳು ಭರ್ತಿಯಾಗಿದ್ದು, ಬೆಳೆಗಳು ಉತ್ತಮವಾಗಿ ಬಂದಿವೆ. ಇದರಿಂದ ಅನ್ನದಾತನ ಮುಖದಲ್ಲಿ ಮಂದಹಾಸ ಮತ್ತೆ ಮರುಕಳಿಸಿದಂತಾಗಿದೆ.












Click it and Unblock the Notifications