Karnataka Rains: ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Karnataka Rains: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನು ಇದೀಗ ಚಳಿಗಾಲ ಆರಂಭವಾಗಿದ್ದರೂ, ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಇಂದು (ನವೆಂಬರ್ 15) ಕೆಲವೇ ಕ್ಷಣಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನ ಇದ್ದಕ್ಕಿಂದ್ದಂತೆ ಮಳೆರಾಯ ಆರ್ಭಟಿಸಿದ್ದಾನೆ. ಸಂಜೆಯಾಗುತ್ತಿದ್ದಂತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ರಾತ್ರಿ ವೇಳೆಗೆ ಮಳೆ ಮುಂದುವರೆಯುವ ಮುನ್ಸೂಚನೆ ಇದೆ.

ಕಳೆದ ಮೂರು ದಿನಗಳಿಂದ ಬೆಂಗಳೂರಿನ ಹಲವೆಡೆ ಚುಮು..ಚುಮು ಚಳಿಯ ನಡುವೆಯೂ ಜಿನುಗು ಮಳೆಯಾಗುತ್ತಿದೆ. ಹಾಗೆಯೇ ಇಂದು ಕೂಡ ನಗರದ ಹಲವೆಡೆ ಇದೇ ವಾತಾವರಣ ಮುಂದುವರೆದಿದೆ. ಹಾಗೆಯೇ ಇನ್ನೂ ಕೆಲವೇ ಕ್ಷಣಗಳಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂವಚನೆ ಇದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚನೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಳಿಯ ನಡುವೆಯೂ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
Intense THUNDERSTORM activity is seen over parts of Tumakuru, Ramanagara, Mandya, Mysuru & Chamarajanagara districts#KarnatakaRains pic.twitter.com/mt04fY57sc
— Karnataka Weather (@Bnglrweatherman) November 15, 2024
ಮುಂಗಾರು ಆರ್ಭಟ: ಈಗಾಗಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಬೆಳಗಾವಿ, ಬಾಗಲಕೋಟೆ, ಗದಗ, ಬೀದರ್, ಹಾವೇರಿ, ಕಲಬುರಗಿ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ಧಾರವಾಡ, ಹುಬ್ಬಳ್ಳಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.
ಈ ಬಾರೀ ಮುಂಗಾರು ಮಳೆ ಆರ್ಭಟಿಸಿದ ಹಿನ್ನೆಲೆ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ಜಲಾಶಯಗಳು ಭರ್ತಿಯಾಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಕೆಆರ್‌ಎಸ್, ಕಬಿನಿ, ಹೇಮಾವತಿ, ಹಾರಂಗಿ, ತುಂಗಭದ್ರಾ, ಭದ್ರಾ, ಆಲಮಟ್ಟಿ, ಘಟಪ್ರಭಾ ಸೇರಿದಂತೆ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳು ಈ ಬಾರಿ ಭರ್ತಿಯಾಗಿವೆ.
ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ಬತ್ತಿಹೋಗುವ ಹಂತವನ್ನು ತಲುಪಿದ್ದವು. ಮತ್ತೊಂದೆಡೆ ಅನ್ನದಾತರು ಬೆಳೆದ ಬೆಳಗಳೆಲ್ಲವೂ ಸೂರ್ಯನ ಶಾಖಕ್ಕೆ ಮುದುಡಿ ಹೋಗಿದ್ದು, ಅನ್ನದಾತ ಕಂಗಾಲಾಗಿದ್ದ.
ಆದರೆ, ಈ ಬಾರಿ ಅಂದರೆ, 2024ರ ಜೂನ್ ಆರಂಭ ಆಗುತ್ತಿದ್ದಂತೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಇದರಿಂದ ಬಹುತೇಕ ಜಲಾಮೂಗಳು ಭರ್ತಿಯಾಗಿದ್ದು, ಬೆಳೆಗಳು ಉತ್ತಮವಾಗಿ ಬಂದಿವೆ. ಇದರಿಂದ ಅನ್ನದಾತನ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.












Click it and Unblock the Notifications