Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಇದೀಗ ಚಳಿಯ ನಡುವೆಯೂ ಮಳೆರಾಯ ಹಲವೆಡೆ ಆರ್ಭಟ ಮುಂದುವರೆಸಿದ್ದಾನೆ. ಹಾಗೆಯೇ ಇಂದು (ನವೆಂಬರ್ 16) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಮಳೆ ಸುರುಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೂ ಚಳಿಯ ನಡುವೆಯೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಕೆಲವೇ ಕ್ಷಣಗಳಲ್ಲಿ ನಗರದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಹೆಚ್ಚಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ಕಳೆದ ಮೂರು ದಿನಗಳಿಂದ ನಗರದ ಹಲವೆಡೆ ಜಿನುಗು ಮಳೆಯಾಗಿದ್ದು, ಮೋಡ ಕವಿದ ವಾತಾವರಣವೇ ಮುಂದುವರೆದಿದೆ. ಹಾಗೆಯೇ ಇನ್ನೂ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.

ಎಲ್ಲಲ್ಲಿ ಭಾರೀ ಸುರಿಯಲಿದೆ ತಿಳಿಯಿರಿ: ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿದೆ. ಇದೀಗ ಚಳಿಗಾಲದ ನಡುವೆಯೂ ಬಂಗಾಲ ಕಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಇಂದು (ನವೆಂಬರ್ 16) ಇನ್ನೂ ಕೆಲವೇ ಕ್ಷಣಗಳಲ್ಲಿ ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ರಾಮನಗರ, ಕೋಲಾರ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
SATURDAY FORECAST FOR KARNATAKA
— Namma Karnataka Weather (@namma_vjy) November 16, 2024
GM Friends.
Lets check the overall setup:
UAC can be spotted SE of Sri Lanka
UAC can be spotted in SE Arabian Sea
Forecast:
Possibility for scattered light rains today in Hassan, Mysuru, Mandya, Bengaluru, Ramanagara, Kolar, CB Pura,… pic.twitter.com/bDYNlym2kH
ಬಹುತೇಕ ಜಿಲ್ಲೆಗಳನ್ನಾವರಿಸಿದ್ದ ಮುಂಗಾರು: ಈಗಾಗಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಬೆಳಗಾವಿ, ಬಾಗಲಕೋಟೆ, ಗದಗ, ಬೀದರ್, ಹಾವೇರಿ, ಕಲಬುರಗಿ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ಧಾರವಾಡ, ಹುಬ್ಬಳ್ಳಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿದೆ.
ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿ: ಇನ್ನು ಈ ಬಾರೀ ಮುಂಗಾರು ಮಳೆ ಆರ್ಭಟಿಸಿದ ಹಿನ್ನೆಲೆ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ಜಲಾಶಯಗಳು ಭರ್ತಿಯಾಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಕೆಆರ್‌ಎಸ್, ಕಬಿನಿ, ಹೇಮಾವತಿ, ಹಾರಂಗಿ, ತುಂಗಭದ್ರಾ, ಭದ್ರಾ, ಆಲಮಟ್ಟಿ, ಘಟಪ್ರಭಾ ಸೇರಿದಂತೆ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳು ಈ ಬಾರಿ ಭರ್ತಿಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.
ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ಬತ್ತಿಹೋಗುವ ಹಂತವನ್ನು ತಲುಪಿದ್ದವು. ಮತ್ತೊಂದೆಡೆ ಅನ್ನದಾತರು ಬೆಳೆದ ಬೆಳಗಳೆಲ್ಲವೂ ಸೂರ್ಯನ ಶಾಖಕ್ಕೆ ಮುದುಡಿ ಹೋಗಿದ್ದು, ಅನ್ನದಾತ ಕಂಗಾಲಾಗಿದ್ದ. ಆದರೆ, ಈ ಬಾರಿ ಅಂದರೆ, 2024ರ ಜೂನ್ ಆರಂಭ ಆಗುತ್ತಿದ್ದಂತೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಇದರಿಂದ ಬಹುತೇಕ ಜಲಾಮೂಗಳು ಭರ್ತಿಯಾಗಿದ್ದು, ಬೆಳೆಗಳು ಉತ್ತಮವಾಗಿ ಬಂದಿದ್ದು, ಅನ್ನದಾತನ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.












Click it and Unblock the Notifications