Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಮುನ್ಸೂಚನೆ
Karnataka Rains: ಈಗಾಗಲೇ ರಾಜ್ಯದಲ್ಲಿ ಮುಂಗಾರು ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸುಷ್ಟಿಯಾಗಿವೆ. ಮತ್ತೇ ಇದೀಗ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾರೆ. ಹಾಗೆಯೇ ಇಂದು (ಅಕ್ಟೋಬರ್ 31) ಮುಂದಿನ ಕೆಲವೇ ಕ್ಷಣಗಳಲ್ಲಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇದ್ದು, ಸಂಜೆ ಆಗುತ್ತಿದ್ದಂತೆ ನಗರದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಹಾಗೆಯೇ ರಾತ್ರಿಯೂ ಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂವನೆ ಇದೆ. ಅಲ್ಲದೆ, ಹಲವು ಜಿಲ್ಲೆಗಳಲ್ಲೂ ಕೂಡ ಭಾರೀ ಮಳೆ ಸುರಿಯಲಿದೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು (ಅಕ್ಟೋಬರ್ 31) ಇನ್ನೂ ಕೆಲವೇ ಕ್ಷಣಗಳಲ್ಲಿ ಹಲವು ಜಿಲ್ಲೆಗಳಲ್ಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಿದೆ.
ಇನ್ನು ಗುಡುಗು ಸಹಿತ ಭಾರೀ ಮಳೆ ಸುರಿಯುವ ಮುನ್ಸೂಚನೆ ಹಿನ್ನೆಲೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಬಾಗಲಕೋಟೆ, ಬಿಜಾಪುರ, ಬೆಳಗಾವಿ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮತ್ತೊಂದೆಡೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅಲ್ಲದೆ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಅಕ್ಟೋಬರ್ 31 ಹಾಗೂ ನವೆಂಬರ್ 1ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಬೆಂಗಳೂರಿನಲ್ಲಿ ಕೆಲವು ದಿನಗಳ ಕಾಳ ಮಳೆ ಮುಂದುವರೆಯಲಿದೆ ಅಂತಲೂ ತಿಳಿಸಿದೆ.
ಕಳೆದ ಬಾರಿ ಅಂದರೆ, 2023ರಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ ರಾಜ್ಯದ ಬಹುತೇಕ ಜಲಮೂಲಗಳೆಲ್ಲ ಬತ್ತಿಹೋಗುವ ಹಂತವನ್ನು ತಲುಪಿದ್ದವು. ಆದರೆ, ಈ ಬಾರಿ 2024 ಜೂನ್ ಆರಂಭವಾಗುತ್ತಿದ್ದಂತೆ ರಾಜ್ಯದಕ್ಕೆ ಮುಂಗಾರು ಎಂಟ್ರಿ ಕೊಟ್ಟ ಕಾರಣ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಇದರಿಂದ ಈ ಬಾರಿ ಉತ್ತಮ ಫಸಲು ಬಂದಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.












Click it and Unblock the Notifications