Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ರಣಮಳೆ
Karnataka Rains: ರಾಜ್ಯದ ಹಲವೆಡೆ ಇದೀಗ ಮತ್ತೆ ಮುಂಗಾರು ಮಳೆ ಚುರುಕು ಪಡೆದಿದೆ. ಹಾಗೆಯೇ ಇಂದು (ಸೆಪ್ಟೆಂಬರ್ 1) ಇನ್ನೂ ಕೆಲವೂ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇನ್ನೂ ಇದೀಗ ಅಸ್ನಾ ಚಂಡಮಾರುತದ ಪ್ರಭಾವ ದೇಶದ ಹಲವು ರಾಜ್ಯಗಳ ಮೇಲೆ ಬೀರಿದ್ದು, ಕರ್ನಾಟಕದ ಮೇಲೂ ಇದರ ನೆರಳು ಈಗಾಗಲೇ ಬಿದ್ದಾಗಿದೆ. ಈ ಹಿನ್ನೆಲೆ ಹಲವೆಡೆ ಮತ್ತೆ ಮಳೆಯಾಗಿದೆ ಎನ್ನುವ ಹಾಡಿನ ರೀತಿಯಲ್ಲಿ ಮಳೆರಾಯ ಮತ್ತೇ ತನ್ನ ಆರ್ಭಟವನ್ನು ಶುರು ಮಾಡಿದ್ದಾನೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಮೋಡ ಕವಿದ ವಾತಾವರಣ ನಿರ್ಮಾಣ ಆಗುತ್ತಿದ್ದು, ರಾತ್ರಿ ವೇಳೆ ಮಳೆರಾಯ ಬಿಡುವು ನೀಡಿ ಎಂಟ್ರಿ ಕೊಡುತ್ತಿದ್ದಾನೆ. ಹಾಗೆಯೇ ನಗರದಲ್ಲಿ ಇನ್ನೂ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.
ಅಲ್ಲದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಯಾದಗಿರಿ, ಗುಲ್ಬರ್ಗ, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಹಾಗೆಯೇ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಧಾರವಾಡ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಒಂದು ವಾರ ಮಳೆ: ಕರಾವಳಿ ಕರ್ನಾಟಕ, ಆಂಧ್ರಪ್ರದೇಶ, ಲಕ್ಷದ್ವೀಪ, ಕೇರಳ, ತೆಲಂಗಾಣ , ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಇಂದು (ಸೆಪ್ಟೆಂಬರ್ 01) ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶ, ಮಧ್ಯಪ್ರದೇಶ ಮತ್ತು ಗುಜರಾತ್‌ನ ಕೆಲವು ಭಾಗಗಳಲ್ಲಿ, ಛತ್ತೀಸ್‌ಗಢ, ಗೋವಾ ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ: ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಸೆಪ್ಟೆಂಬರ್ 15ರ ಮತ್ತೆ ಮುಂಗಾರು ಮಳೆ ಚುರುಕು ಪಡೆಯಲಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ನವದೆಹಲಿ, ಪೂರ್ವ ರಾಜಸ್ಥಾನ , ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಛತ್ತೀಸ್‌ಗಢ, ಜಾರ್ಖಂಡ್, ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಳ , ತ್ರಿಪುರಾ, ಪಶ್ಚಿಮ ಕರಾವಳಿ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದ ಎಂದು ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶ ಮತ್ತು ಕೇರಳದಲ್ಲಿ ಭೂಕುಸಿತ ಎಚ್ಚರಿಕೆಯನ್ನೂ ನೀಡಿದೆ. ಈಗಾಗಲೇ ಭಾರೀ ಮಳೆಯಿಂದ ಗುಜರಾತ್‌ನಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ.












Click it and Unblock the Notifications