Karnataka Rains: ಎಚ್ಚರ.. ಎಚ್ಚರ..24 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ-ಯೆಲ್ಲೋ ಅಲರ್ಟ್‌

Karnataka Rains: ಈಗಾಗಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಜೂನ್‌ನಿಂದ ಆರಂಭವಾದ ಮಳೆ ಆರ್ಭಟ ಆಗಸ್ಟ್‌ನಲ್ಲಿ ತಗ್ಗಿದ್ದು, ಮತ್ತೆ ಇದೀಗ ಅಕ್ಟೋಬರ್‌ನಲ್ಲಿ ಚುಕುರು ಪಡೆದಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಈ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ನಿರ್ಮಾಣ ಆಗಿದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ನಗರದಲ್ಲಿ ರಣ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ನಿನ್ನೆ ನಗರದ ಹಲವೆಡೆ ಮಳೆರಾಯನ ಅಬ್ಬರಿಸಿ ಬೊಬ್ಬೆರೆದಿದ್ದ. ಇನ್ನು ಇಂದಿನಿಂದ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆಯನ್ನು ನೀಡಿದೆ.

Karnataka Rains Heavy Rainfall Forecast in These Districts of State in Next 24 Hours-Yellow Alert

ಇಷ್ಟು ದಿನ ತಗ್ಗಿದ ಮಳೆ ಇದೀಗ ಮತ್ತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚುರುಕು ಪಡೆದಿದೆ. ಹಾಗೆಯೇ ನಾಳೆ (ಅಕ್ಟೋಬರ್‌ 15) ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಅಲ್ಲದೆ ಈ ಭಾಗಗಳ ಜನರಿಗೆ ಮುನ್ನೆಚರಿಕೆ ವಹಿಸುವಂತೆ ಸಂದೇಶವನ್ನು ರವಾನಿಸಿದೆ.

ಈಗಾಗಲೆ ಚಾಮರಾಜನಗರ, ಮೈಸೂರು, ಮಂಡ್ಯ, ಕಲಬುರಗಿ, ಧಾರವಾಡ, ಹುಬ್ಬಳ್ಳಿ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಕೊಡಗು, ಶಿವಮೊಗ್ಗ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಭಾರೀ ಮಳೆ: ರಾಜ್ಯದಲ್ಲೇ ಅತೀ ಹೆಚ್ಚು ಬಿಸಿಲು ದಾಖಲಾಗುವ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಈ ಬಾರಿ ಇತಿಹಾಸ ಸೃಷ್ಟಿಯಾದಂತಾಗಿದೆ.

ಆಯುಧಪೂಜೆ ಹಾಗೂ ವಿಜಯದಶಮಿ ಹಬ್ಬದಲ್ಲೂ ವರುಣನ ಆರ್ಭಟ ಜೋರಾಗಿತ್ತು. ಇತ್ತ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಅತೀ ಹೆಚ್ಚು ವಾರ್ಷಿಕ ಮಳೆಯಾಗುವ ಮೂಲಕ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕಳೆದ 30 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಮಳೆಯಾಗಿದ್ದು, ಹೋಬಳಿಯ 5 ಕೆರೆಗಳು ಕೋಡಿ ಬಿದ್ದಿವೆ.

ರಾಜ್ಯದಲ್ಲೆ ಅತೀ ಕಡಿಮೆ ಮಳೆ ಬೀಳುವ ಪ್ರದೇಶವೆಂದು ಗುರುತಿಸಿಕೊಂಡಿರುವ ನಾಯಕನಹಟ್ಟಿಯಲ್ಲಿ ಈ ವರ್ಷದಲ್ಲಿ ದಾಖಲೆ ಮಟ್ಟದಲ್ಲಿ ಮಳೆ ಸುರಿದಿದೆ. ಇನ್ನು ಸತತವಾಗಿ ಬರಗಾಲ ಪಟ್ಟಿಯಲ್ಲಿ ಸಿಲುಕಿದ್ದ ಜಿಲ್ಲೆಯು ಈ ಬಾರಿ ಮಳೆರಾಯನ ಕೃಪೆಯಿಂದ ಬಿಸಿಲಿನ ಹೊಡೆತದಿಂದ ತಪ್ಪಿಸಿಕೊಂಡಿದೆ. ಇನ್ನಿ ಭಾರೀ ಮಳೆಯಿಂದ ನಾಯಕನಹಟ್ಟಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಹಲವು ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.

ನಾಯಕನಹಟ್ಟಿ ಹೋಬಳಿಯ ರೇಖಲಗೆರೆ, ಮನಮೈನಹಟ್ಟಿ, ಗುಂತಕೋಲಮ್ಮನಹಳ್ಳಿ ಕೆರೆ, ಭೀಮನ ಕೆರೆ ಮತ್ತು ವರವು ಕೆರೆಗಳು ಭರ್ತಿಯಾಗಿ ಕೋಡಿ ಹರಿದಿದೆ. ‌ತಿಪ್ಪೇರುದ್ರಸ್ವಾಮಿಗಳು ನಿರ್ಮಿಸಿದ್ದ ದೊಡ್ಡ ಕೆರೆ 16 ಅಡಿ ಆಳವಿದ್ದು, 10 ಅಡಿ ನೀರು ಸಂಗ್ರಹವಾಗಿದೆ.

ಸ್ವಾಮೀಜಿಯವರು ನಿರ್ಮಿಸಿದ ಚಿಕ್ಕ 12 ಅಡಿ ಸಾಮರ್ಥ್ಯದ ಕೆರೆಯಲ್ಲೂ 10 ಅಡಿ ನೀರು ಬಂದಿದೆ. 1999ರಲ್ಲಿ ಚಿಕ್ಕ ಕೆರೆ ಕೋಡಿ ಹರಿದಿತ್ತು. 25 ವರ್ಷಗಳ ನಂತರ ಅಂದರ ಈ ಬಾರಿ ಹೆಚ್ಚಿನ ನೀರು ಸಂಗ್ರಹವಾಗಿದೆ. ತಳಕು ಸಮೀಪದ ತಿಪ್ಪಯ್ಯನ ಕೋಟೆ ಕೆರೆ ತುಂಬಿದ್ದು, ಕೆರೆಗೆ ನೀರು ಒದಗಿಸುವ ದೊಡ್ಡ ಹಳ್ಳದಲ್ಲಿ ಭರಪೂರ ನೀರು ಹರಿಯುತ್ತಿದ್ದು, ಇಂದು ಮತ್ತೆ ಮಳೆಯಾದರೆ ಯಾವಾಗ ಬೇಕಾದರೂ ಕೋಡಿ ಹರಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯಲ್ಲಿ ಕಳೆದ 30 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ವಾರ್ಷಿಕ ವಾಡಿಕೆ ಮಳೆ 415.9 ಮಿಲಿ ಮೀಟರ್ ಮಳೆಯಾಗಿದೆ. ಆದರೆ ಪ್ರಸಕ್ತ ಸಾಲಿನಲ್ಲಿ 113.8 ಮಿಲಿ ಮೀಟರ್ ಮಳೆ ಸುರಿದಿದೆ. ಕಳೆದೊಂದು ವಾರದಿಂದ ಪ್ರತಿದಿನ ಮಳೆ ಸುರಿಯುತ್ತಿರುವುದರಿಂದ ಭೂಮಿ ತಂಪಾಗಿದೆ. ಮಳೆಯಿಂದ ಬಂದ ನೀರು ಸರಾಗವಾಗಿ ಸಣ್ಣ-ಪುಟ್ಟ ಹಳ್ಳ, ಚೆಕ್ ಡ್ಯಾಂ ಸೇರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+