Karnataka Rains: ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ ಮನ್ಸೂಚನೆ-ಬೇಗ ಮನೆ ಸೇರ್ಕೊಳಿ?
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಈಗಾಗಲೇ ಹಲವೆಡೆ ಭಾರೀ ಮಳೆಯಿಂದ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಇಂದು (ಅಕ್ಟೋಬರ್ 24) ಇನ್ನೂ ಕೆಲವೇ ಗಂಟೆಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹಲವೆಡೆ ಜಿನುಗು ಮಳೆ ಆರಂಭವಾಗಿದೆ. ಇನ್ನೂ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಹೆಚ್ಚಿದೆ ಎಂದು ಎಚ್ಚರಿಕೆ ಸಂದೇಶವನ್ನು ಹವಾಮಾನ ಇಲಾಖೆ ರವಾನಿಸಿದೆ. ಅಲ್ಲದೆ, ಇನ್ನುಳಿದ ಹಲವು ಜಿಲ್ಲೆಗಳಲ್ಲೂ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ವ್ಯಾಪಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಹಾಗೆಯೇ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಇನ್ನು ಕೆಲವೆಡೆ ಮಳೆಯ ಚಟುವಟಿಕೆಯು ಮಧ್ಯಾಹ್ನದ ನಂತರ ಪ್ರಾರಂಭ ಆಗಲಿದ್ದು, ತಡರಾತ್ರಿಯವರೆಗೆ ಮುಂದುವರೆಯಲಿದೆ ಎಂದು ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಭಾರೀ ಮಳೆ ಸುರಿದ ಪರಿಣಾಮ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದೆ. ಅಪಾರ್ಟ್‌ಮೆಂಟ್‌ಗಳು, ದೊಡ್ಡ ದೊಡ್ಡ ಕಟ್ಟಡಗಳು, ವಾಹನಗಳು ನೀರಿನಲ್ಲಿ ಮುಳುಗಡೆಯಾದ ಘಟನೆಗಳು ಸಂಭವಿಸಿವೆ. ಅಲ್ಲದೆ ಹಲವೆಡೆ ಕಟ್ಟಡಗಳು ಕುಸಿದು ಹಾನಿ ಸಂಭವಿಸಿರುವ ಘಟನೆಗಳು ನಡೆದಿವೆ.
ಮುಂಗಾರು ಮೊದಲು ಕೇರಳಕ್ಕೆ ಎಂಟ್ರಿ ಕೊಟ್ಟಿದ್ದು, ಬಳಿಕ ಕರ್ನಾಟಕದಾದ್ಯಂತ ಆವರಿಸಿಬಿಟ್ಟಿತ್ತು. ಈ ವೇಳೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕೆರೆ-ಕಟ್ಟೆಗಳು, ನದಿಗಳು, ಬಹುತೇಕ ಪ್ರಮುಖ ಜಲಾಶಯಗಳು ತುಂಬಿದ್ದು, ಇನ್ನೂ ಕೆಲವೇ ಕೆಲವು ಡ್ಯಾಂಗಳು ಮಾತ್ರ ಭಾರ್ತಿಯಾಗುವ ಹಂತವನ್ನು ತಲುಪಿದ್ದವು. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಗಿತ್ತು.












Click it and Unblock the Notifications