Karnataka Rains: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Karnataka Rains: ಜೂನ್ ಆರಂಭದಿಂದ ಮುಂಗಾರು ಚುರುಕು ಪಡೆದಿದ್ದು, ಇದೀಗ ಮತ್ತೇ ಅದೇ ಆಡಿದ ಆಟ ಎಂಬಂತೆ ಮಳೆರಾಯನ ಆರ್ಭಟ ಕಡಿಮೆಯಾಗಿ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯುತ್ತಿದೆ. ಮತ್ತೊಂದೆಡೆ ಕೆಲವೇ ಕೆಲಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಹಾಗೆಯೇ ಇಂದು (ಜೂನ್ 24) ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಾಗ ಅಷ್ಟೇ ಮಳೆ ಸುರಿಯುತ್ತಿದೆ. ಮೇ ಮಧ್ಯದಿಂದ ನಗರದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಮತ್ತೆ ಜೂನ್ ಆರಂಭದಿಂದ ಚುರುಕು ಪಡೆದಿತ್ತು. ಆದರೆ ಇದೀಗ ಆಗಾಗ ಅಷ್ಟೇ ಮಳೆಯಾಗುತ್ತಿದೆ. ಇನ್ನು ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಹಾಗೆಯೇ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟಿಸಲಿದ್ದಾರೆ ಎನ್ನುವ ಮುನ್ಸೂಚನೆ ಇದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಕಲಬುರಗಿ, ರಾಯಚೂರು, ಕೋಲಾರ, ಚಾಮರಾಜನಗರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಇಂದು (ಜೂನ್ 24) ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಭಾರೀ ಮಳೆ ಹಿನ್ನೆಲೆ ಉತ್ತರ ಒಳನಾಡಿನ ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಫೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Today's forecast: #KarnatakaRains
— Karnataka Weather (@Bnglrweatherman) June 24, 2024
• Widespread heavy to very heavy rains likely over Coastal Karnataka districts
• Widespread moderate to scattered heavy rains likely over Malenadu districts
• Scattered light to isolated moderate rains likely over the Interiors
ಅದರಲ್ಲೂ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಭಾರೀ ಮಳೆ ಸಾಧ್ಯತೆಯಿದ್ದು, ಹಾಗೆಯೇ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ












Click it and Unblock the Notifications