Karnataka Rains: ಆಗಸ್ಟ್‌ 1ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದ ಪರಿಣಾಮ ನದಿ, ಕೆರೆ-ಕಟ್ಟೆಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದು ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಆಗಷ್ಟ್ 1ರ ವರೆಗೂ ಈ ಭಾಗಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಈಗಾಗಲೇ ಭಾರೀ ಮಳೆಯಿಂದ ಉತ್ತರ ಕನ್ನಡ ಭಾಗದಲ್ಲಿ ಬೆಟ್ಟ-ಗೊಡ್ಡ ಕುಸಿದು ಹೆದ್ದಾರಿ ಬಂದ್‌ ಆಗಿರುವ ಘಟನೆ ನಡೆದಿದೆ. ಅಲ್ಲದೆ, ಈಗಲೂ ಈ ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಹಾಗೆಯೇ ಇದೇ ರೀತಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಹೆದ್ದಾರಿಗಳು ಸಂಪರ್ಕ ಬಂದ್‌ ಆಗಿರುವ ಘಟನೆಗಳು ನಡೆದಿವೆ. ಇನ್ನು ಕರಾವಳಿ ಕರ್ನಾಟಕದಲ್ಲಿ ಮುಂದಿನ 9-10 ದಿನಗಳ ಕಾಲವೂ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains Heavy rainfall forecast in these districts till August 1st

ಕಾವೇರಿ ಜಲಾನಯನ ಪ್ರದೇಶಗಳನ್ನು ಒಳಗೊಂಡಂತೆ ಆಗಸ್ಟ್ ಮೊದಲ ವಾರದವರೆಗೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಈ ಭಾಗಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಮತ್ತೊಂದೆಡೆ, ಚಾಮರಾಜನಗರ, ದಾವಣಗೆರೆ, ಮೈಸೂರು, ಚಿತ್ರದುರ್ಗ, ಬೀದರ್‌, ಕೋಲಾರ, ಧಾರವಾಡ, ಕಲಬುರಗಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

ಇನ್ನೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಹ ಮಳೆರಾಯ ಅಬ್ಬರಿಸಿ ಬೊಬ್ಬರೆಯಲಿದ್ದಾನೆ ಎನ್ನುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ಸುತ್ತಮುತ್ತಲಿನ ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಉತ್ತಮ ಮಳೆ ಸುರಿಯಲಿದೆ ಎಂದು ತಿಳಿಸಿದೆ.

ಈಗಾಗಲೇ ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಹಿತದೃಷ್ಟಿಯಿಂದ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ, ಹಲವೆಡೆ ಭಾರೀ ಮಳೆಯಿಂದ ರಸ್ತೆ ಸಂಪರ್ಕಗಳು ಬಂದ್‌ ಆಗಿದ್ದು, ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳು ಸೂಚಿಸುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಎರಡು ವಾರಗಳಿಂದಲೂ ಮಲೆನಾಡು, ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಮಂದುವರೆದ ಪರಿಣಾಮ ಜನ ಜೀವನ ಅಸ್ತವ್ಯಸ್ತ ಆಗಿದೆ. ಇದೀಗ ಮುಂಗಾರು ಮಳೆ ಉತ್ತರ ಕರ್ನಾಟಕ ಭಾಗದಲ್ಲೂ ಮಳೆ ಆರ್ಭಟಿಸಲು ಶುರು ಮಾಡಿದೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವೆಡೆ ಈಗಾಗಲೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+