Karnataka Rains: ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಶಾಲೆಗಳಿಗೆ ರಜೆ ಘೋಷಣೆ ಸಾಧ್ಯತೆ..
Karnataka Rains: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ರಣ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದು ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಇದೀಗ ಮುಂದಿನ ಐದು ದಿನಗಳ ಕಾಲ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್ 21) ಮಳೆ ಬಿಡುವು ನೀಡಿದೆ. ಆದರೂ, ಮಧ್ಯಾಹ್ನ ಅಥವಾ ಸಂಜೆ ವೇಳಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಅಲ್ಲದೆ, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಹಲವು ದಿನಗಳ ಕಾಲ ರಣಭೀಕರಣ ಮಳೆ ಸುರಿಯುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ ಉತ್ತಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಸೇರಿದಂತೆ ಹಲವೆಡೆ ಇಂದು (ಆಗಸ್ಟ್ 21) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಮುಂಗಾರಿನ ಜೊತೆ ವಾಯುಭಾರ ಕುಸಿತ ಪರಿಣಾ ಹಲವು ಭಾಗಗಳಲ್ಲಿ ರಣಮಳೆ ಸುರಿದಿದೆ.
ಇನ್ನು ಆಗಸ್ಟ್ 22ರಿಂದ 26ರ ವರೆಗೆ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನು ಇಂದು (ಆಗಸ್ಟ್ 21) ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಭಾರೀ ಮಳೆಯಿಂದಾಗಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ರಣಭೀಕರ ಮಳಡಯಿಂದಾಗಿ ದೊಡ್ಡ ಅವಾಂತರಗಳೇ ಸಂಭವಿಸಿವೆ. ಅದರಲ್ಲೂ ನಿನ್ನೆ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿದ ಕಾರಣ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇನ್ನು ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದ್ದು, ಇದರಿಂದ ಜನರು ಮುಂದೆ ಇನ್ನೇನು ಕಾದೈತೋ ಎನ್ನುವ ಆತಂಕದಲ್ಲಿ ಕೈಯಲ್ಲಿ ಜೀವ ಹಿಡಿದುಕೊಂಡು ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ರಜೆ ಘೋಷಣೆ ಸಾಧ್ಯತೆ: ಇನ್ನು ಭಾರೀ ಮಳೆಯಿಂದ ಈಗಾಗಲೇ ಹಲವೆಡೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಒಂದು ವೇಳೆ ಮತ್ತೆ ಭಾರೀ ಮಳೆ ಮುಂದುವರೆದರೆ, ರಜೆ ದಿನಗಳ ವಿಸ್ತರಣೆ ಮಾಡುವ ಸಾಧ್ಯತೆಯಿದೆ. ಅಲ್ಲದೆ, ಈ ರಜೆಗಳನ್ನು ಸರಿದೂಗಿಸುವ ನಿರ್ಧಾರಗಳನ್ನು ಆಯಾ ಜಿಲ್ಲಾಡಳಿತಗಳು ತೆಗೆದುಕೊಂಡಿವೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಿಂದುಳಿಯಬಾರದು ಎನ್ನುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications