Karnataka Rains: ಮುಂದಿನ ಮೂರು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಬಲು ಮಳೆ ಮುನ್ಸೂಚನೆ
Karnataka Rains: ಇದೀಗ ಚಳಿಯ ನಡುವೆಯೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 3 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಮೋಡ ಕವಿ ವಾತಾವರಣ ಇದ್ದು, ಬಳಿಕ ಬಿಸಿಲಿನ ವಾತಾವರಣ ಮುಂದುವರೆದಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ನಗದ ಹಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಹಾಗೆಯೇ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್ 9ರಂದು ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ದಾವಣಗೆರೆ, ಮೈಸೂರು, ಮಂಡ್ಯ, ಹಾಸನ, ಹಾವೇರಿ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ಕೊಪ್ಪಳ, ಧಾರವಾಡ ಗದಗ, ಬಾಗಲಕೋಟೆ, ಬೆಳಗಾವಿ, ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್ 10ರಂದು ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳ ಪ್ರತ್ಯೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಉತ್ತರ ಕನ್ನಡ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು ಜಿಲ್ಲೆಗ ಅಲ್ಲಲ್ಲಿ ಸಾಧಾರಣ ಮಂಎಯಾಗುವ ಸಾಧ್ಯತೆಯಿದೆ. ಇನ್ನು ಜಿಲ್ಲೆಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 11ರಂದು ಚಾಮರಾಜಗರ ಜಿಲ್ಲೆಯ ಪ್ರತ್ಯೇಕ ಭಾಗಗಳಲ್ಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಕೊಡಗು ಜಿಲ್ಲೆಗಳ ಪ್ರತ್ಯೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲಿ ಎಂದ ಹವಾಮಾನ ಇಲಾಖೆ ತಿಳಿಸಿದೆ.
09.12.2024 ರಂತೆ ಮುಂದಿನ ಮೂರು ದಿನಗಳ ರಾಜ್ಯದ #ಮಳೆ #ಮುನ್ಸೂಚನೆ ನಕ್ಷೆ:@KarnatakaVarthe #KSNDMC
— Karnataka State Natural Disaster Monitoring Centre (@KarnatakaSNDMC) December 9, 2024
Next 3 days #rainfall #forecast maps as of 09.12.2024: #KarnatakaRains pic.twitter.com/k3Id43gxd0
ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ಅವಾಂತರಗಳನ್ನೇ ಸೃಷ್ಟಿ ಮಾಡಿದೆ. ಮತ್ತೊಂದೆಡೆ ಮುಂಗಾರು ಎಂಟ್ರಿಯಿಂದ ಬಹುತೇಕ ಭಾಗಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು, ಜಲಾಶಯಗಳು ತುಂಬಿ ಹರಿದಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.
ಯಾಕೆಂದರೆ ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಕಾರಣ ಜಲಮೂಲಗಳೆಲ್ಲ ಬತ್ತಿ ಹೋಗುವ ಹಂತ ತಲುಪಿದ್ದು, ಅಂತರ್ಜಲ ಮಟ್ಟ ಕಡಿಮೆಯಾಗಿತ್ತು. ಬೋರ್‌ವೆಲ್‌ಗಳಲ್ಲಿ ನೀರೇ ನಿಂತು ಹೋಗಿಬಿಟ್ಟಿದ್ದವು. ಇದರಿಂದ ಬರದ ಛಾಯೆ ಆವರಿಸಿಬಿಟ್ಟಿತ್ತು. ಆದರೆ ಇದೀಗ 2024ರಲ್ಲಿ ಮುಂಗಾರು ಮಳೆ ಆರ್ಭಟಿಸಿದ ಹಿನ್ನೆಲೆ ಬರದ ಛಾಯೆ ದೂರ ಆದಂತಾಗಿದೆ. ಮತ್ತೊಂದೆಡೆ ಈಗಾಗಲೇ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಹಾಗೆಯೇ ಇದೀಗ ಮತ್ತೊಂದು ಚಂಡಮಾರುತರ ಮುನ್ಸೂಚನೆ ಇದ್ದು, ಮತ್ತೆ ಮಳೆರಾಯ ಅಬ್ಬರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.












Click it and Unblock the Notifications