Cyclone Effect: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲದ ನಡುವೆಯೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಹಲವೆಡೆ ಮಳೆಯಾಗುತ್ತಿವೆ. ಹಾಗೆಯೇ ಮುಂದಿನ 3 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 12) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನಿರ್ಮಣವಾಗಿದ್ದು ಹಲವೆಡೆ ಜಿನುಗು ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains Heavy Rainfall Forecast in These districts Till December 14 Know details

ಡಿಸೆಂಬರ್ 12ರಂದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಹಾವೇರಿ, ಯಾದಗಿರಿಯ ಹಲವೆಡೆ, ರಾಯಚೂರಿನ ಕಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್ 13ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಮಂಡ್ಯ, ದಕ್ಷಿಣ ಕನ್ನಡ, ಚಾಮರಾಜನಗರ, ಕೋಲಾರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವೆಡೆ, ಹಾವೇರಿ, ವಿಜಯನಗರ ಜಿಲ್ಲೆಯ ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನುಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಡಿಸೆಂಬರ್ 14ರಂದು ಕೆಲವೆ ಜಿಲ್ಲೆಗಳಲ್ಲಿ ಮಾತ್ರ ಜಿನುಗು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಅಂದರೆ 2024ರ ಜೂನ್ ಆರಂಭದಲ್ಲಿಯೇ ಮುಂಗಾರು ಮಳೆ ಆರ್ಭಟಿಸಿದ್ದು, ಪರಿಣಾಣ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದತಾಗಿದೆ.

2023ರಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ರಾಜ್ಯದಲ್ಲಿ ಬರದ ಛಾಯೆ ಆವರಿಸಿತ್ತು. ಇದರಿಂದ ಜಲಮೂಲಗಳೆಲ್ಲ ಬತ್ತಿಹೋಗಿದ್ದವು. ಅಲ್ಲದೆ ಸೂರ್ಯನ ಶಾಖಕ್ಕೆ ರೈತರು ಬೆಳೆದ ಬೆಳಗಳೆಲ್ಲವೂ ಮುದುಡಿ ಹೋಗಿದ್ದವು. ಇದರಿಂದ ಅನ್ನದಾತರು ಕಂಗಾಲಾಗಿದ್ದರು. ಆದರೆ ಈ ಬಾರಿ ಭಾರೀ ಮಳೆಯಾಗಿ ಉತ್ತಮ ಬೆಳೆಗಳೇನೋ ಬಂದಿವೆ. ಆದರೆ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಯಾವುದೇ ಸೂಕ್ತ ಬೆಲೆಯಿಲ್ಲದೇ ರೈತರು ಪರದಾಡುವಂತಹ ಪರಿಸ್ಥಿನಿ ನಿರ್ಮಾಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+