Karnataka Rains: ಡಿಸೆಂಬರ್ 17ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Karnataka Rains: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಚಳಿಯ ನಡುವೆಯೂ ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 13) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇದ್ದು, ಹಲವೆಡೆ ಜಿನುಗು ಮಳೆ ಮುಂದುವರೆದಿದೆ. ಮಧ್ಯಾಹ್ನದ ಮೇಲೆ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆಯಿದೆ. ಹಾಗೆಯೇ ಹಲವು ಜಿಲ್ಲೆಗಳಲ್ಲಿ ಕೂಡ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್ 13ರಿಂದ 17ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಬಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ,ಮಂಡ್ಯ, ಮಡಿಕೇರಿ, ಮೈಸೂರು. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಬೆಳಗಾವಿ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಗೆಯೇ ಡಿಸೆಂಬರ್ 17ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮತ್ತು ಡಿಸೆಂಬರ್ 19ರಿಂದ ಕರಾವಳಿ ಭಾಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 17ರಿಂದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮಡಿಕೇರಿ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ
ಡಿಸೆಂಬರ್ 19ರಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2023ರಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ರಾಜ್ಯದಲ್ಲಿ ಬರದ ಛಾಯೆ ಆವರಿಸಿತ್ತು. ಇದರಿಂದ ಜಲಮೂಲಗಳೆಲ್ಲ ಬತ್ತಿಹೋಗಿದ್ದವು. ಅಲ್ಲದೆ ಸೂರ್ಯನ ಶಾಖಕ್ಕೆ ರೈತರು ಬೆಳೆದ ಬೆಳಗಳೆಲ್ಲವೂ ಮುದುಡಿ ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದರು. ಆದರೆ ಈ ಬಾರಿ ಭಾರೀ ಮಳೆಯಾಗಿ ಉತ್ತಮ ಬೆಳೆಗಳು ಬಂದಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.












Click it and Unblock the Notifications