Karnataka Rains: ಡಿಸೆಂಬರ್ 20ರ ವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿ ಬೊಬ್ಬೆರೆದ ಹಿನ್ನೆಲೆ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಸಯಾಗಿವೆ. ಇದೀಗ ಚಳಿಗಾಲದ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 4) ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಮೋಡ ಕವಿದ ವಾತಾವರಣ ಇದ್ದು, ಬಳಿಕ ವೇಳೆಗೆ ಬಿಸಿಲಿನ ವಾತಾವರಣ ನಿರ್ಮಾಣವಾಗಿದೆ. ಇನ್ನು ಸಂಜೆ ಅಥವಾ ರಾತ್ರಿ ವೇಳೆಗೆ ನಗರದ ಹಲವೆಡೆ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಹಲವು ಜಿಲ್ಲೆಗಳಲ್ಲೂ ಕೂಡ ಮಳೆರಾಯನ ಆರ್ಭಟ ಮುಂದುವರೆಯಲಿದೆ ಅಂತಲೂ ತಿಳಿಸಿದೆ.

Karnataka Rains Heavy Rainfall Forecast in These districts Till December 20

ಎಲ್ಲೆಲ್ಲಿ ಭಾರೀ ಮಳೆ?: ಡಿಸೆಂಬರ್ 4ರಿಂದ 12ರ ವರೆಗೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದ. ಇನ್ನು ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಎಂದು ತಿಳಿಸಿದೆ.

ಡಿಸೆಂಬರ್ 20ರ ವರೆಗೂ ಮಳೆ: ಡಿಸೆಂಬರ್ 12ರಿಂದ 20ರ ವರೆಗೂ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಾಮರಾಜನಗರ ಜಿಲ್ಲೆಯ ಹಲವೆಡೆ ಮಳೆ ಬೀಳುವ ಸಾಧ್ಯತೆಯಿದೆ. ಇದೇ ವೇಳೆ ಧಾರವಾಡ, ಗದಗ, ಬಳ್ಳಾರಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ದಾವಣಗೆರೆ ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಮಂಡ್ಯ, ಕೊಪ್ಪಳ, ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ಮೋಡ ಕವಿದ ವಾತಾವರಣ?: ಇದೇ ವೇಳೆ ಇನ್ನುಳಿದಂತೆ ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ರಾಯಚೂರು ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ ಎಂದು ತಿಳಿಸಿದೆ. ಆದರೆ, ಬೆಳಗ್ಗೆ ಮತ್ತು ಸಂಜೆ ವೇಳೆ ಚಳಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.

2023ರಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ ಕೃಷಿ ಬೆಳೆಗಳೆಲ್ಲ ಸೂರ್ಯನ ಶಾಖಕ್ಕೆ ಸುಟ್ಟು ಅನ್ನದಾತ ಕಂಗಾಲಾಗಿದ್ದ. ಆದರೆ, ಈ ಬಾರಿ ಅಂದರೆ 2024ರ ಜೂನ್‌ ಆರಂಭ ಆಗುತ್ತಿದ್ದಂತೆಯೇ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟ ಪರಿಣಾಮ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಸೇರಿದಂತೆ ಪ್ರಮುಖ ಜಲಾಶಯಗಳು ಕೂಡ ಭರ್ತಿಯಾಗಿವೆ. ಇದರಿಂದ ಅನ್ನದಾತರ ಮುಖದಲ್ಲಿ ಕಮರಿ ಹೋಗಿದ್ದ ಮಂದಹಾಸ ಮತ್ತೆ ಮೂಡಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+