Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಡಿಸೆಂಬರ್ 23ರ ವರೆಗೂ ಮಳೆ ಮುನ್ಸೂಚನೆ
Karnataka Rains: ಇದೀಗ ಚಳಿಗಾಲದ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಹಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂವರ್ 20) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವೇ ಮುಂದುವರೆದಿದೆ. ಸಂಜೆ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾಬ ಇಲಾಖೆ ತಿಳಿಸಿದೆ.

ಡಿಸೆಂಬರ್ 20 & 21 ರಂದು ಚಾಮರಾಜನಗರ, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕಲಬುರಗಿ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 22ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಮೈಸೂರು, ಕೊಡಗು ಜಿಲ್ಲೆಗಳ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ ಎಂದು ತಿಳಿಸಿದೆ.
ಡಿಸೆಂಬರ್ 23ರಂದು ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಕೋಲಾರ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದಲ್ಲಿ ಬಹುತೇಕ ಜಿಲೆಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮೊದಲು ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು ಬಳಿಕ ಕರ್ನಾಟಕಕ್ಕೆ ಭರ್ಜರಿಯಾಗಿ ಎಂಟ್ರಿ ಕೊಟ್ಟು ದೊಡ್ಡ ಸೌಂಡ್ ಮಾಡಿ ಹೋಯಿತು. ಈ ವೇಳೆ ಸುರಿದ ಭಾರೀ ಮಳೆಯಿಂದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳೆಲ್ಲ ಭರ್ತಿಯಾಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಕೂಡ ಮೂಡಿದೆ. ಮತ್ತೊಂದೆಡೆ ಹಲವೆಡೆ ಅತೀವೃಷ್ಠಿಯಿಂದಾಗಿ ಬೆಳೆಗಳೆಲ್ಲ ನಾಶವಾದ ಘಟನೆಗಳು ಕೂಡ ನಡೆದಿವೆ.
ಅದೇನೇ ಇರ್ಲಿ ಒಟ್ಟಿನಲ್ಲಿ ಮಳೆರಾಯ ಬರವನ್ನೆಲ್ಲ ನೀಗಿಸಿದನಲ್ಲ ಅಷ್ಟು ಸಾಕು. ಆದರೆ ನಷ್ಟ ಪರಿಹಾರದ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಈ ಬಾರಿ ಭಾರೀ ಮಳೆಯಿಂದ ಉತ್ತಮ ಬೆಳೆಗಳೇನೋ ಬಂದಿವೆ. ಆದರೆ, ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಕಾಟದಿಂದ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲ ಎಂದು ರೈತರು ಅಳಲು ತೋಡಿಕೊಳ್ಳುತ್ತಲೇ ಇದ್ದಾರೆ. ಇದಕ್ಕೂ ಕೂಡ ಸರ್ಕಾರವೇ ಸೂಕ್ತ ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕಂತಲೂ ಕೂಡ ರೈತರು ಆಗ್ರಹಿಸುತ್ತಿದ್ದಾರೆ.
2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯಾದ್ಯಂತ ಬರದ ಛಾಯೆ ಆವರಿಸಿದ ಹಿನ್ನೆಲೆ ಕೃಷಿ ಬೆಳೆಗಳೆಲ್ಲ ಸೂರ್ಯನ ಶಾಖಕ್ಕೆ ಸುಟ್ಟು ಹೋಗಿದ್ದವು. ಇದರಿಂದ ಅನ್ನದಾತ ಕಂಗಾಲಾಗಿದ್ದ. ಆದರೆ ಈ ಬಾರಿ ಉತ್ತಮ ಫಸಲು ಬಂದರೂ ಸೂಕ್ತ ಬೆಲೆ ಸಿಗುತ್ತಿಲ್ಲ ಎನ್ನುವುದು ರೈತರ ಅಳಲಾಗಿದೆ.












Click it and Unblock the Notifications