Karnataka Rains: ಡಿಸೆಂಬರ್ 24ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ಈಗಾಗಲೇ ರಜ್ಯದಲ್ಲಿ ಮುಂಗಾರು ಆರ್ಭದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೇಷ್ಟಿಯಾಗಿವೆ. ಇದೀಗ ಚಳಿಗಾಲದ ನಡುವೆಯೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 3 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂವರ್ 21) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನದಿಂದ ಬಿಸಿಲಿನ ವಾತಾವರಣ ಮುಂದುವರೆದಿದೆ. ಸಂಜೆ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

Karnataka Rains Heavy Rainfall Forecast in These districts Till December 24 Know details

ಡಿಸೆಂಬರ್ 21 & 22 ರಂದು ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ವಿಜಯಪುರ, ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಹಾವೇರಿ, ಧಾರವಾಡ, ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ ಎಂದು ತಿಳಿಸಿದೆ.

ಡಿಸೆಂಬರ್ 23ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ವಿಜಯನಗರ, ರಾಮನಗರ ಜಿಲ್ಲೆಗಳೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದೇ ವೇಳೆ ಶಿವಮೊಗ್ಗ, ಮಂಡ್ಯ, ಮೈಸೂರು, ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಉತ್ತರ ಕನ್ನಡ, ಬೀದರ್, ಬಾಗಲಕೋಟೆ, ಬೆಳಗಾವಿ, ಹಾವೇರಿ, ಧಾರವಾಡ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲೆ ಎಂದು ತಿಳಿಸಿದೆ.

ಡಿಸೆಂಬರ್ 24ರಂದು ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೊದಲು ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು ಬಳಿಕ ಕರ್ನಾಟಕಕ್ಕೆ ಭರ್ಜರಿಯಾಗಿ ಎಂಟ್ರಿ ಕೊಟ್ಟು ದೊಡ್ಡ ಸೌಂಡ್‌ ಮಾಡಿ ಹೋಯಿತು. ಈ ವೇಳೆ ಸುರಿದ ಭಾರೀ ಮಳೆಯಿಂದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳೆಲ್ಲ ಭರ್ತಿಯಾಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಕೂಡ ಮೂಡಿದಂತಾಗಿದೆ. ಮತ್ತೊಂದೆಡೆ ಹಲವೆಡೆ ಅತೀವೃಷ್ಠಿಯಿಂದಾಗಿ ಬೆಳೆಗಳೆಲ್ಲ ನಾಶವಾದ ಘಟನೆಗಳು ಕೂಡ ನಡೆದಿವೆ.

ಒಟ್ಟಿನಲ್ಲಿ ಮಳೆರಾಯ ಬರವನ್ನೆಲ್ಲ ನೀಗಿಸಿದನಲ್ಲ ಅಷ್ಟು ಸಾಕು. ಆದರೆ ನಷ್ಟ ಪರಿಹಾರದ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಈ ಬಾರಿ ಭಾರೀ ಮಳೆಯಿಂದ ಉತ್ತಮ ಬೆಳೆಗಳೇನೋ ಬಂದಿವೆ. ಆದರೆ, ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಕಾಟದಿಂದ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲ ಎಂದು ರೈತರು ಅಳಲು ತೋಡಿಕೊಳ್ಳುತ್ತಲೇ ಇದ್ದಾರೆ. ಇದಕ್ಕೂ ಕೂಡ ಸರ್ಕಾರವೇ ಸೂಕ್ತ ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕಂತಲೂ ಕೂಡ ರೈತರು ಆಗ್ರಹಿಸುತ್ತಿದ್ದಾರೆ. ಇನ್ನು 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯಾದ್ಯಂತ ಬರದ ಛಾಯೆ ಆವರಿಸಿದ ಹಿನ್ನೆಲೆ ಕೃಷಿ ಬೆಳೆಗಳೆಲ್ಲ ಸೂರ್ಯನ ಶಾಖಕ್ಕೆ ಸುಟ್ಟು ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+