Karnataka Rains: ಡಿಸೆಂಬರ್ 8ರ ವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲದ ನಡುವೆಯೂ ಹಲವೆಡೆ ಮಳೆರಾಯನ ಅಬ್ಬರಿಸುತ್ತಿದ್ದಾರೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 06) ಇಂದು ಬೆಳಗ್ಗೆ 10 ಗಂಟೆವರೆಗೂ ಮೋಡ ಕವಿ ವಾತಾವರಣ ಇದ್ದು, ಬಳಿಕ ಸಂಜೆವರೆಗೂ ಬಿಸಿಲಿನ ವಾತಾವರಣ ಮುಂದುವರೆದಿದೆ. ಇನ್ನೂ ಕೆಲವೇ ಕ್ಷಣಗಳಲ್ಲಿ ನಗರದ ಹಲವೆಡೆ ಚಳಿಯ ನಡುವೆಯೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains Heavy Rainfall Forecast in These districts Till December 8

ಇಂದು (ಡಿಸೆಂಬರ್ 06) ಕೆಲವೇ ಕ್ಷಣಗಳಲ್ಲಿ ರಾಜ್ಯದ ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಚದುರಿದಂತೆ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

5 ದಿನಗಳ ಹವಾಮಾನ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಮಲೆನಾಡಿಮ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಮತ್ತು ಒತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಮೂರು ದಿನ ಮಳೆ: ಇಂದು (ಡಿಸೆಂಬರ್ 06) ಉತ್ತರ ಕನ್ನಡ, ಧಾರವಾಡ, ಹಾವೇರಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಅಲ್ಲಲ್ಲಿ ಚುದರಿಂದತೆ ಇನ್ನೂ ಕೆಲವೇ ಕ್ಷಣಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ಯಾವುದೇ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ 07ರಂದು ಬೀದರ್‌, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನುಳಿದಂತೆ ಉಳಿದ ಜಿಲ್ಲಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಎಂದು ತಿಳಿಸಿದೆ.

ಡಿಸೆಂಬರ್ 8ರಂದು ಯಾದಗಿರಿ, ಬಾಗಲಕೋಟೆ, ಗದಗ, ಹಾವೇರಿ, ದಾವಣಗೆರೆ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನುಳಿದಂತೆ ಉಳಿದ ಜಿಲ್ಲಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+