Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆ ಮುನ್ಸೂಚನೆ
Karnataka Rain: ಇದೀಗ ರಣಭೀಕರ ಚಳಿ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಇದೀಗ ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಈ ಭಾಗಗಳಲ್ಲಿ ಜನವರಿ 3ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಯಾವಾಗ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಮೋಡ ಕವಿದ ವಾತಾವರಣ ಇದ್ದು, ಬಳಿಕ ಬಿಸಿಲಿನ ವಾತಾವರಣ ಮುಂದುವರೆದಿತ್ತು. ಇನ್ನು ಸಂಜೆಯಾಗುತ್ತಿದ್ದಂತೆ ಮಂಜಿನ ನಡುವೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಕೆಲವೇ ಕ್ಷಣಗಳಲ್ಲಿ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಡಿಸೆಂಬರ್ 26ರ ವರೆಗೆ ಎಲ್ಲೆಲ್ಲಿ ಮಳೆ?: ಡಿಸೆಂಬರ್ 18ರಿಂದ 26ರ ವರೆಗೂ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದ ಹಲವೆಡೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಇದೇ ವೇಳೆ ಧಾರವಾಡ, ಹಾವೇರಿ, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಅಲ್ಲಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಉಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ ಎಂದು ತಿಳಿಸಿದೆ.
ಜನವರಿ 3ರ ವರೆಗೂ ಎಲ್ಲೆಲ್ಲಿ ಮಳೆ?: ಡಿಸೆಂಬರ್ 26ರಿಂದ ಜನವರಿ 3ರ ವರೆಗೆ ಕಲಬುರಗಿ ಸುತ್ತಮುತ್ತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ಹಾವೇರಿ ದಾವಣಗೆರೆ, ವಿಜಯನಗರ, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಮಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ ಎಂದು ತಿಳಿಸಿದೆ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ರಾಜ್ಯದಲ್ಲಿ ಅವಾಂತರಗಳೇ ಸೃಷ್ಟಿಯಾಗಿವೆ. ರಾಜ್ಯಕ್ಕೆ ಜೂನ್ ಆರಂಭದಲ್ಲಿಯೇ ಮುಂಗಾರು ಮಳೆ ಎಂಟ್ರಿ ಕೊಟ್ಟಿದ್ದು, ಈ ಹಿನ್ನೆಲೆ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು, ಹಾಗೂ ಜಲಾಶಯಗಳು ಭರ್ತಿಯಾಗಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಇನ್ನು ಕಳೆದ ಬಾರಿ ಅಂದರೆ 2013ರಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ ರಾಜ್ಯಾದ್ಯಂತ ಬರದ ಛಾಯೆ ಆವರಿಸಿಬಿಟ್ಟಿತ್ತು. ಕೃಷಿ ಬೆಳೆಗಳೆಲ್ಲವೂ ಸೂರ್ಯನ ಶಾಖಕ್ಕೆ ಮುದುಡಿ ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದರು.












Click it and Unblock the Notifications