Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಫೆಬ್ರವರಿಯಿಂದಲೇ ಭಾರೀ ಮಳೆ ಮುನ್ಸೂಚನೆ

Karnataka Rains: ಇದೀಗ ರಾಜ್ಯಾದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಇನ್ನು ಮುಂದಿನ ತಿಂಗಳು ಅಂದರೆ 2025ರ ಫೆಬ್ರವರಿಯಿಂದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 29) ಬೆಳಗ್ಗೆ ಮೋಡ ಕವಿದ ವಾತಾವರಣ ಜೊತೆ ಭೀಕರ ಚಳಿ ಮುಂದುವರೆದಿತ್ತು. ಸಂಜೆಯೂ ಕೂಡ ನಗರದಲ್ಲಿ ಚಳಿ ಮುಂದುವರೆಯಲಿದೆ. ಇದೇ ರೀತಿ ವಾತಾವರಣ ಇನ್ನೂ ಒಂದು ವಾರ ಇರಲಿದ್ದು, ಬಳಿಕ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಫೆಬ್ರವರಿಯಿಂದ ರಣಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.

Karnataka Rains Heavy Rainfall Forecast on These districts of State from February 2

ಫೆಬ್ರವರಿ 2 2025ರಿಂದ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಇದೀಗ ಮಳೆ ಮಾರುತ ಸೃಷ್ಟಿ ಆಗಿದ್ದು, ಪರಿಣಾಮ ರಾಜ್ಯದಲ್ಲಿ ಫೆಬ್ರವರಿ 2ರಿಂದ ಮತ್ತೆ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬೆಳಗಾವಿಯಲ್ಲಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮಗರ ಸೇರಿಂದತೆ ಹಲವು ಭಾಗಗಳಲ್ಲಿ ಫೆಬ್ರವರಿ 4ರ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಕಡೆಗಳಲ್ಲಿ ಒಳಹವೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ಮೋಡಗಳು ಸೃಷ್ಟಿ ಆಗಿರುವುದರಿಂದ ರಾಜಧಾನಿ ಬೆಂಗಳೂರು ಸೇರಿ ಹಲವು ಕಡೆ ಕನಿಷ್ಠ ಉಷ್ಣಾಂಶದಲ್ಲಿ ಏರಿಕೆ ಆಗಿದೆ. ಇನ್ನು ಕೆಲವೆಡೆ ಚಳಿಯ ತೀವ್ರತೆ ಕಡಿಮೆ ಯಾಗುತ್ತಾ ಬರುತ್ತಿದೆ. ಈಗಾಗಲೇ ಕಳೆ ಬಾರಿ ಅಂದರೆ 2024ರ ಜುಲೈ ಆರಂಭವಾಗುತ್ತಿದ್ದಂತೆ ಮುಂಗಾರು ಎಂಟ್ರಿ ಕೊಟ್ಟು ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿತ್ತು. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನದಿ, ಕೆರೆ, ಹಳ್ಳ-ಕೊಳ್ಳಗಳು, ಪ್ರಮುಖ ಜಲಾಶಯಗಳು ತುಂಬಿ ಹರಿದಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು.

ತುಂಗಾಭದ್ರ, ಭದ್ರಾ, ಮಲಪ್ರಭಾ, ಘಟಪ್ರಭಾ, ಕೆಆರ್‌ಎಸ್‌, ಕಬಿನಿ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಇದರಿಂದ ಈ ರೈತರಲ್ಲಿ ಭರದ ಆತಂಕ ದೂರ ಆದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+