Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಕೆಲವೆಡೆ ಭಾರೀ ಮಳೆಯಾಗಿ ಅವಾಂತರಗಳೇ ಸೃಷ್ಟಿಯಾದರೆ, ಇನ್ನೂ ಕಲೆವೆಡೆ ಸಾಧಾರಣ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಈ ಭಾಗಗಳಲ್ಲಿ ಬಿರುಗಾಳಿ ಸಹಿತ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾಹಿತಿ ಇಲ್ಲಿದೆ ನೋಡಿ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಸೇರಿದಂತೆ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಮತ್ತೊಂದೆಡೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ಕಲಬುರಗಿ, ತುಮಕೂರು, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ.

Karnataka Rains Heavy rainfall forecast till july 26th in these districts know details

ಕರಾವಳಿ, ದಕ್ಷಿಣ ಒಳನಾಡು ಭಾಗದಲ್ಲಿ ಜುಲೈ 26ರ ವರರಗೂ ಮುಂಗಾರು ಮತ್ತಷ್ಟು ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಉತ್ತರ ಕನ್ನಡ, ಉಡುಪಿ, ದಕ್ಷಿಣ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 26ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಯಾದಗಿರಿ, ಕಲಬುರಗಿ, ದಾವಣಗೆರೆ, ಚಿತ್ರದುರ್ಗ, ಧಾರವಾಡ, ವಿಜಯಪುರ, ಕಲಬುರಗಿ, ಬೀದರ್‌ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರಿಲ್ಲಿ ಮುಂದಿನ ಕೆಲವು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಸಾಧರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವು ಗಂಟೆಗೆ 40-50 ಕಿಲೋ ಮೀಟರ್‌ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿದ ಕೆಲವು ಭಾಗಗಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಒಟ್ಟಿನಲ್ಲಿ ಹಲವೆಡೆ ಭಾರೀ ಮಳೆ ಮುಂದುವರೆಯಲಿದ್ದು, ಇನ್ನು ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈಗಾಗಲೇ ಇಂದು (ಜುಲೈ 25) ಬೆಳ್ಳಂಬೆಳಗ್ಗೆಯೇ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+