Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 1ರ ವರೆಗೂ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ರಣಭೀಕರ ಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಭರ್ಜರಿ ಮಳೆಯಾಗುತ್ತಿದೆ ಹಾಗೆಯೇ ಇಂದಿನಿಂದ ಏಪ್ರಿಲ್ 1ರ ವರೆಗೂ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣಭೀಕರ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಆರ್ಭಟಿಸಿ ದೊಡ್ಡ ದೊಡ್ಡ ಅವಾಂಗತರಗಳೇ ಸೃಷ್ಟಿಸಿವೆ. ಇನ್ನು ಇಂದು (ಮಾರ್ಚ್ 28) ಬೆಳಗ್ಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನದ ವೇಳೆಗೆ ಬಿಸಿಲು ಮುಂದುವರೆಯಲಿದೆ. ಬಳಿಕ ಭಾರೀ ಮಳೆಯಾಗಲುಬಹುದು ಎನ್ನುವ ಮುನ್ಸೂಚನೆ ಇದೆ. ಹೀಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವೆಡೆ ಗರಿಷ್ಠ ಉಷ್ಣಾಂಶದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ನಡುವೆಯೂ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಇನ್ನು ಏಪ್ರಿಲ್ 1ರ ವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಣಭೀಕರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಚಾಮರಾಜನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರುನ ನಗರದ ಹಲವೆಡೆ ಅಬ್ಬರದ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ರಾಜ್ಯದ ಕರಾವಳಿ ಭಾಗಗಳಲ್ಲಿ ಮಳೆಯ ಆರ್ಭಟ ತುಸು ಹೆಚ್ಚಾಗಿರಲಿದೆ ಅಂತಲೂ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಹುತೇಕ ಜಿಲ್ಲೆಗಳಲ್ಲಿ ರಣಭೀಕರ ಬಿಸಿಲು ಮುಂದುವರೆದ ಹಿನ್ನೆಲೆ ಕಚೇರಿಗಳ ಸಮಯದಲ್ಲಿ ಬದಲಾವಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ರಾಯಚೂರು ಭಾಗದಲ್ಲಿ ತಾಪಮಾನವು 43ರಿಂದ 44 ಡಿಗ್ರಿ ಸೆಲ್ಸಿಯಸ್ ಸಮೀಪದಲ್ಲಿದೆ. ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ 2ರಿಂದ 4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಲ್ಲೂ ಕಲಬುರಗಿ, ಬೀದರ್, ಬಾಗಲಕೋಟೆ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ಸಂದೇಶ ನೀಡಿದೆ. ಈಗಾಘಲೇ ಈ ಜಿಲ್ಲೆಗಳಲ್ಲಿ ದಾಖಲೆ ಮಟ್ಟದಲ್ಲಿ ತಾಪಮಾನ ದಾಖಲಾದ ಉದಾಹರಣೆ ಇದೆ.
ವಿಚಿತ್ರ ಎಂದರೆ ಈ ವರ್ಷ ಬೆಂಗಳೂರು ಅತೀ ಹೆಚ್ಚು ತಾಪಮಾನ ದಾಖಲೆಯ ಪುಟಕ್ಕೆ ಸೇರಿ. ಮತ್ತೊಂದೆಡೆ ಬೇಸಿಗೆ ಆರಂಭಕ್ಕೂ ಮುನ್ನ ರಾಯಚೂರು, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣ ದಲ್ಲಿ ತಾಪಮಾನ ದಾಖಲಾಗುತ್ತಿತ್ತು. ಆದರೆ ಈ ಬಾರಿ ಬೇಸಿಗೆ ಆರಂಭಕ್ಕೂ ಮುನ್ನೂ ಕರಾವಳಿ ಭಾಗದಲ್ಲಿ ದಾಖಲೆ ಮಟ್ಟದ ತಾಪಮಾನ ದಾಖಲಾಗಿತ್ತಿ. ಇದೀಗ ಕರಾವಳಿ ಜಿಲ್ಲೆಗಳಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಿನ ವಾತಾವರಣ ತುಸು ತಂಪಾಗಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.












Click it and Unblock the Notifications