Karnataka Rains Big Update: ಮುಂದಿನ ಒಂದು ವಾರ ರಾಜ್ಯದ ಇಷ್ಟು ಜಿಲ್ಲೆಗಳಲ್ಲಿ ರಣಭೀಕರ ಮಳೆ ಮುನ್ಸೂಚನೆ

Karnataka Rains Big Update: ಎರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಮುಂದುವರೆದಿದೆ. ಕಳೆದ ಒಂದು ವಾರದಿಂದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಮುಂದಿನ ಒಂದು ವಾರ ಈ 16 ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಮಾಹಿತಿ ಇಲ್ಲಿದೆ ತಿಳಿಯಿರಿ.

ರಾಜ ರಾಜಧಾನಿ ಕಳೆದ ಮುರ್ನಾಲ್ಕು ದಿನಗಳಿಂದ ಮಳೆ ಮುಂದುವರೆದಿದೆ. ಇನ್ನು ಇಂದು (ಅಕ್ಟೋಬರ್ 13) ಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಹಾಗೆಯೇ ಉಳಿದ ಜಿಲ್ಲೆಗಳಲ್ಲೂ ಸಹ ಮಳೆಯಾಗಲಿದೆ ಎಂದು ತಿಳಿಸಿದೆ.

Karnataka Rains Heavy Rainfall with Thunderstorms Forecast in These Districts Until October 19

ಮುಂದಿನ ಒಂದು ವಾರ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಹ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಅಕ್ಟೋಬರ್ 19ರವರೆಗೂ ಮಳೆ ರಣಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಹಾಗೆಯೇ ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿಯೂ ಮಳೆ ಸುರಿಯಲಿದೆ ಎಂದು ತಿಳಿಸಿದೆ. ಈಗಾಗಲೇ ಹಲವು ಜಿಲ್ಲಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಅವಾಂತರಗಳು ಸೃಷ್ಟಿಯಾಗಿದೆ.

ನಿನ್ನೆ ಅಂದರೆ ಶನಿವಾರ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಿದೆ. ಚಿತ್ರದುರ್ಗ, ದಾವಣಗೆರೆ, ಮೈಸೂರು, ಧಾರವಾಡ, ಹುಬ್ಬಳ್ಳಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಯಾದಗಿರಿ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಗಳೂರು, ವಿಜಯಪುರ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+