Karnataka Rains: ರಾಜ್ಯದ 16 ಜಿಲ್ಲೆಗಳಲ್ಲಿ ರಣಭೀಕರ ಮಳೆ: ಐಎಂಡಿ ರಿಪೋರ್ಟ್!
Karnataka Rains: ಕರ್ನಾಟಕದ ವಿವಿಧ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಪಡೆದುಕೊಂಡಿದ್ದು ಧಾರಾಕಾರ ಮಳೆಯಾಗುತ್ತಿದೆ. ಇನ್ನು ಬೆಂಗಳೂರು ಸೇರಿದಂತೆ ವಿವಿಧೆಡೆ ಇನ್ನೂ 5 ದಿನ ರಣಭೀಕರ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಶನಿವಾರ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಇನ್ನೂ 5 ದಿನಗಳ ಕಾಲ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬಂಗಾಳಕೊಲ್ಲಿಯಲ್ಲಿ ಎದುರಾಗಿರುವ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೊಂದು ವಾರ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಐಎಂಡಿ ರಿಪೋರ್ಟ್ ಹೇಳಿದೆ. ಏಪ್ರಿಲ್ 18ರ ವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ. ಬಂಗಾಳಕೊಲ್ಲಿಯಲ್ಲಿಯ ಪಶ್ಚಿಮ - ಮಧ್ಯ ಭಾಗದಲ್ಲಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರಕ್ಕೆ ಚಂಡಮಾರುತ ವಿಸ್ತರಿಸಿದೆ.

ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ವಿವಿಧ ಭಾಗದಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ವಿವರ ನೋಡೋಣ.
ಏಪ್ರಿಲ್ 13: ಭಾನುವಾರ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಇರಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಏಪ್ರಿಲ್ 14: ಕರ್ನಾಟಕದ ಕರಾವಳಿ ಭಾಗದಲ್ಲಿ ಸೋಮವಾರ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ.
ಏಪ್ರಿಲ್ 15: ಕರಾವಳಿ ಜಿಲ್ಲೆಗಳಲ್ಲಿ ಹಾಗೂ ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಏಪ್ರಿಲ್ 18ರ ವರೆಗೆ ರಾಜ್ಯದ ವಿವಿಧ ಭಾಗದಲ್ಲಿ ಮಳೆಯಾಗಲಿದೆ ಎಂದು ವರದಿ ಉಲ್ಲೇಖಿಸಲಾಗಿದೆ.
ತಾಪಮಾನ ಮುನ್ಸೂಚನೆ: ಇನ್ನು ಮುಂದಿನ 5 ದಿನಗಳ ವರೆಗೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ಮಹತ್ವದ ಬದಲಾವಣೆ ಇಲ್ಲ. ಆದರೆ, ಗರಿಷ್ಠ ತಾಪಮಾನವು ಭಾರೀ ಕುಸಿಯುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳು ಆಗಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ರಿಪೋರ್ಟ್ ಹೇಳಿದೆ. ಉಳಿದಂತೆ ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆ ನೀಡಿಲ್ಲ.












Click it and Unblock the Notifications