Karnataka Rains: ಕರ್ನಾಟಕದಲ್ಲಿ ಜುಲೈ 3ರ ವರೆಗೆ ರಣಭೀಕರ ಮಳೆ: ಈ ಜಿಲ್ಲೆಗಳಲ್ಲಿ ಐಎಂಡಿ ರೆಡ್ & ಆರೆಂಜ್, ಯೆಲ್ಲೋ ಅಲರ್ಟ್!
Karnataka Rains: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಣಭೀಕರ ಮಳೆ ಮುಂದುವರಿದಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಬೆಂಗಳೂರಿನಲ್ಲೂ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದಲೂ ರಾಜ್ಯದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇದೀಗ ಜುಲೈ 3ರ ವರೆಗೆ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೆಡ್, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ಇನ್ನೂ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ರಾಜ್ಯದಾದ್ಯಂತ ಭಾನುವಾರ ಹಾಗೂ ಸೋಮವಾರ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತು ಮಲೆನಾಡಿನ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.
ಅಲ್ಲದೇ ಉತ್ತರ ಕರ್ನಾಟಕದ ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಮುಂದುವರಿದ್ದು ಈ ಭಾಗದಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಕೊಡಗಿನಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ನೆರೆಯ ಕೇರಳದಲ್ಲಿ ಭಾರೀ ಮಳೆ ಆಗಿರುವುದು ಸಹ ರಾಜ್ಯದ ಹವಾಮಾನದ ಮೇಲೆ ಪರಿಣಾಮ ಬೀರಿದೆ.
ಈ ಜಿಲ್ಲೆಗಳಲ್ಲೂ ಮಳೆ ಅಬ್ಬರ: ಇನ್ನು ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆ ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.












Click it and Unblock the Notifications