Rain Alert: ಕರ್ನಾಟಕದಲ್ಲಿ 05 ದಿನ ರಣಮಳೆ ಮುನ್ಸೂಚನೆ, 06 ಜಿಲ್ಲೆಗಳಿಗೆ 'ಹಳದಿ ಎಚ್ಚರಿಕೆ',

ಬೆಂಗಳೂರು, ಅಕ್ಟೋಬರ್ 18: ಕರ್ನಾಟಕ ರಾಜ್ಯದಲ್ಲಿ ಹಲವು ದಿವಸಗಳಿಂದ ಸುರಿಯುತ್ತಿರುವ ಹಿಂಗಾರು ಮತ್ತಷ್ಟು ಜೋರಾಗಲಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಬರಲಿದೆ. ಗುಡುಗು ಮಿಂಚು ಸಹಿತ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ವಿವಿಧ ಜಿಲ್ಲೆಗಳಿಗೆ ಈ ಸಂಬಂಧ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಡಾ.ಸಿ.ಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

ಬೆಂಗಳೂರು ಸೇರಿದಂತೆ ಒಳನಾಡು ಜಿಲ್ಲೆಗಳಿಗೆ ಹೆಚ್ಚು ಸಕ್ರಿಯವಾಗಿರುವ ಹಿಂಗಾರು ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳು, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ.

Karnataka Rains IMD Heavy Rain Issued for These Districts untill October 22nd

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಳೆ/ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಶುಕ್ರವಾರ 'ಯೆಲ್ಲೋ ಅಲರ್ಟ್' ನೀಡಲಾಗಿದೆ.

ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಈ ಆರು ಜಿಲ್ಲೆಗಳನ್ನು ಹೊರತುಪಡಿಸಿದರೆ, ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಿದೆ.

ಇನ್ನೂ ಕಳೆದೊಂದು ವಾರದಿಂದ ಬಿಟ್ಟು ಬಿಡದೇ ಸುರಿದಿದ್ದ ಮಳೆಯು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯಲಿದೆ. ಮತ್ತೆ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆ ಆಗಲಿದೆ ಎಂದು ಐಎಂಡಿ ಮುನ್ಸೂಚನಾ ವರದಿ ತಿಳಿಸಿದೆ.

ಭಾರೀ ಮಳೆಯ ಜಿಲ್ಲೆಗಳು

ದಕ್ಷಿಣ ಒಳನಾಡಿನ ಬೆಂಗಳೂರಿನಲ್ಲಿ ಕೊಂಚ ಮಳೆ ಇಳಿಕೆ ಆಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಹಾಗೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ,ಚಿಕ್ಕಮಳೂರು, ಕೊಡಗು, ಹಾಸನ, ಕೋಲಾರ, ಚಿಕ್ಕಮಗಳೂರು, ತುಮಕೂರು, ದಾವಣಗೆರೆ, ಚಿತ್ರದುರ್ಗ ಭಾಗದಲ್ಲಿ ಬಿರುಸಿನ ಮಳೆ ಆಗುತ್ತಿದೆ. ಇದೇ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ವ್ಯಾಪಕ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಾಯುಭಾರ ಕುಸಿತದ ತೀವ್ರತೆ ಇಳಿಕೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ತಕ್ಕಮಟ್ಟಿಗೆ ಹತೋಟಿಗೆ ಬರುತ್ತಿದೆ. ಅದರ ತೀವ್ರತೆಯಿಂದಲೇ ಕಳೆದ ಒಂದು ವಾರದಿಂದ ಅತ್ಯಧಿಕ ಮಳೆ ಸುರಿಯುತ್ತಿತ್ತು. ಸಮುದ್ರ ಮಟ್ಟದ ಮೇಲ್ಮೈ ತೀವ್ರ ಇಳಿಕೆ ಆಗಿದೆ. ವಾಯಭಾರದ ಬಿರುಗಾಳಿ ಭೂ ಮೇಲ್ಮೈಗೆ ಅಪ್ಪಳಿಸಿದೆ ಎಂದು ತಿಳಿದು ಬಂದಿದೆ.

ಗುರುವಾರ ತಡರಾತ್ರಿಯಿಂದ ಇಂದು ಬೆಳಗ್ಗೆ ವರೆಗೆ ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಇಡೀ ರಾತ್ರಿ ಧಾರಕಾರವಾಗಿ ಸುರಿದಿದೆ. ಪರಿಣಾಮ ಸಂಚಾರ, ಜನಜೀವನ ಅಸ್ತವ್ಯಸ್ಥವಾಗಿದೆ. ಹಿಂಗಾರು ಬಿತ್ತನೆಗೆ ಮಳೆ ತುಸು ಬಿಡುವು ನೀಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+