Karnataka Rains: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರಿ ಮಳೆ ಮುನ್ಸೂಚನೆ

Karnataka Rains: ರಾಜ್ಯದಲ್ಲಿ ಈಗಾಗಲೇ ಮುಂಗಾರು ಕೈಕೊಟ್ಟಿದೆ. ಆದರೆ ಇದೀಗ ಹಲವೆಡೆ ಹಿಂಗಾರು ಆರಂಭವಾಗಿದೆ. ಹಾಗೆಯೇ ಶುಕ್ರವಾರ (ಅಕ್ಟೋಬರ್ 16)ದಿಂದ ಮುಂದಿನ ಮೂರು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ನಿನ್ನೆಯಿಂದಲೇ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇದು ಜನರು ಹಾಗೂ ಅನ್ನದಾತರಿಂದ ಕೊಂಚ ನೆಮ್ಮದಿ ತಂದಿದ್ದರೂ, ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವ ಬಗ್ಗೆ ವರದಿಯಾಗುದೆ.

Karnataka Rains IMD Issues Heavy Rain Forecast for These districts including Bengaluru for 3 Days

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಸುರಿದ ದಿಢೀರ್ ಮಳೆಯಿಂದಾಗಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿ, ಮರದ ಕೊಂಬೆಗಳು ನೆಲಕ್ಕುರುಳಿ ವಾಹನ ಸವಾರರು ಪರದಾಡುವಂತಾಗಿತ್ತು. ಇದೀಗ ಹವಾಮಾನ ಇಲಾಖೆಯು ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಇಂದು ಎಲ್ಲೆಲ್ಲಿ ಭಾರಿ ಮಳೆ?

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ರಾಮನಗರ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಸುರಿಯುವ ಸಾಧ್ಯತೆಯಿದೆ. ಮಳೆಯ ಜೊತೆಗೆ ಗಂಟೆಗೆ 30 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಳೆಯ ಕಣ್ಣಾಮುಚ್ಚಾಲೆ ಮುಂದುವರೆಯಲಿದ್ದು, ಒಣ ಹವೆ ಮತ್ತು ಬಿಸಿಲಿನ ಜೊತೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಅಕ್ಟೋಬರ್ 17 ಹಾಗೂ 18ರಂದು ಎಲ್ಲೆಲ್ಲಿ ಮಳೆ?

ಶನಿವಾರ (ಅಕ್ಟೋಬರ್ 17) ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಭಾರಿ ಮಳೆ ಮುಂದುವರೆಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾನುವಾರ (ಅಕ್ಟೋಬರ್ 18) ಮಳೆಯ ತೀವ್ರತೆ ಕೊಂಚ ಕಡಿಮೆಯಾಗುವ ಲಕ್ಷಣಗಳಿವೆ. ಆದರೂ ರಾಜ್ಯದ ಬಹುತೇಕ ಕಡೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ಅದರಲ್ಲೂ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು, ಸಿಡಿಲಿನ ಪ್ರಮಾಣ ಹೆಚ್ಚಿರಲಿದೆ ಎಂದು ಮುನ್ಸೂಚನೆ ನಿಡಿದೆ.

ಜನರಿಗೆ ಹವಾಮಾನ ಇಲಾಖೆಯ ಪ್ರಮುಖ ಸಲಹೆಗಳು

* ಮಳೆ ಮತ್ತು ಸಿಡಿಲು ಸಮಯದಲ್ಲಿ ಸಾರ್ವಜನಿಕರು ತೆರೆದ ಮೈದಾನ, ಕೆರೆ ಅಂಚು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು.

* ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಳ್ಳುವ ಹಾಗೂ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆಯಿರುವುದರಿಂದ ವಾಹನ ಸವಾರರು ಮತ್ತು ಪ್ರಯಾಣಿಕರು ಎಚ್ಚರ ವಹಿಸಬೇಕು.

ಮೀನುಗಾರರಿಗೆ ಎಚ್ಚರಿಕೆ ಸಂದೇಶ

ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗ ಹೆಚ್ಚಿರಲಿದ್ದು, ಸಮುದ್ರವು ಕ್ಷುಬ್ಧವಾಗಿರಲಿದೆ. ಆದ್ದರಿಂದ ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಮುಂಜಾಗ್ರತಾ ಕ್ರಮವಾಗಿ ಜಾಗ್ರತೆ ವಹಿಸಲು ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+