Karnataka Rains: ವಾಯುಭಾರ ಕುಸಿತ: ಬೆಂಗಳೂರು ಸೇರಿ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ ಐಎಂಡಿ!

Karnataka Rains: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ರಾಜ್ಯದ ವಿವಿಧ ಭಾಗದಲ್ಲಿ ಕಳೆದ ಒಂದು ವಾರದಿಂದಲೂ ಮಳೆ ಆರ್ಭಟ ತುಸು ಇಳಿಕೆಯಾಗಿತ್ತು. ಇದೀಗ ಮತ್ತೆ ಸೋಮವಾರದಿಂದ (ಆಗಸ್ಟ್‌ 26)ರಿಂದ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕರ್ನಾಟಕದ 10 ಪ್ರಮುಖ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಎಲ್ಲೆಲ್ಲಿ ಮಳೆ ಆಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 1ರ ವರೆಗೆ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Karnataka Rains IMD Issues Yellow Alert in 10 Districts as Air Pressure Drops Again

ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಇನ್ನು ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಅಲ್ಲದೇ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು. ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 1ರ ವರೆಗೆ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಇನ್ನೆರಡು ದಿನ ಧಾರಾಕಾರ ಮಳೆ: ಇನ್ನು ರಾಜ್ಯದಲ್ಲಿ ಇನ್ನೆರಡು ದಿನ ಧಾರಾಕಾರ ಮಳೆ ಮುಂದುವರಿಯಲಿದೆ. ಬುಧವಾರ ಹಾಗೂ ಗುರುವಾರ (ಆಗಸ್ಟ್‌ 27 & 28) ಧಾರಾಕಾರ ಮಳೆ ಇರಲಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಪ್ರಮುಖ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಒಡಿಶಾ ಕರಾವಳಿಯ ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಇಂದು ಬೆಳಿಗ್ಗೆ 8.30ಕ್ಕೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಂಡಿದೆ. ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 7.6 ಕಿ.ಮೀ ವರೆಗೆ ವಿಸ್ತರಿಸಿದೆ. ಇದು ಮುಂದಿನ 2 ದಿನಗಳಲ್ಲಿ ಪಶ್ಚಿಮ ವಾಯುವ್ಯಕ್ಕೆ ಚಲಿಸುವ ಸಾಧ್ಯತೆ ಇದೆ. ಒಡಿಶಾ ಕರಾವಳಿಯ ವಾಯುವ್ಯ ಬಂಗಾಳಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶದ ಮಧ್ಯಭಾಗಕ್ಕೆ ಹಾದುಹೋಗುತ್ತದೆ. ಚಂಡಮಾರುತ ಪ್ರಸರಣದಿಂದಾಗಿ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.

ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಇನ್ನು ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು ಮೀನುಗಾರರಿಗೂ ಎಚ್ಚರಿಕೆ ಕೊಡಲಾಗಿದೆ. ಆಗಸ್ಟ್ 26 ರಿಂದ 28, 2025 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 40 - 50 ಕಿ.ಮೀ ನಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+