Karnataka Rains: ಚಂಡಮಾರುತದ ತೀವ್ರತೆ ಏರಿಕೆ: ಮೇ 25ರವರೆಗೆ ಈ ಜಿಲ್ಲೆಗಳಿಗೆ ಮಳೆಯಾರ್ಭಟ, ಎಲ್ಲೆಲ್ಲಿ?
ಬೆಂಗಳೂರು, ಮೇ 20: ಸಮುದ್ರ ಮಟ್ಟದಲ್ಲಿರುವ ಚಂಡಮಾರುತ ಪರಿಚಲನೆ ಪ್ರಭಾವ ಹೆಚ್ಚಾಗುತ್ತಿದೆ. ಗಾಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಇದು ಸೇರಿದಂತೆ ಹಲವು ಹವಾಮಾನ ಬದಲಾವಣೆಗಳಿಂದ ಕರ್ನಾಟಕದಲ್ಲಿ ಮುಂದಿನ 05 ದಿನ ಭಾರೀ ಮಳೆ ಕಂಡು ಬರಲಿದೆ. ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್' ಮತ್ತು 'ಯೆಲ್ಲೋ ಅಲರ್ಟ್' ಘೋಷಿಸಿದೆ.
ತಮಿಳುನಾಡಿನ ದಕ್ಷಿಣದ ಒಳಭಾಗದ ಮತ್ತು ನೆರೆಹೊರೆಯ ಮೇಲೆ ಚಂಡಮಾರುತದ ಪರಿಚಲನೆ ಇದೆ. ಈ ವೈಪರಿತ್ಯ ಸೋಮವಾರ ದಕ್ಷಿಣ ಕರಾವಳಿ ತಮಿಳುನಾಡು ಮತ್ತು ನೆರೆಹೊರೆಯಲ್ಲಿದೆ ಮತ್ತು ಸಮುದ್ರ ಮಟ್ಟದಿಂದ 3.1 ಕಿಮೀ ವರೆಗೆ ಎತ್ತರದಲ್ಲಿದೆ. ಇದು ನೈಋತ್ಯ ದಿಕ್ಕಿನತ್ತ ಸಾಗುವ ಲಕ್ಷಣಗಳು ಕಂಡು ಬಂದಿವೆ.

ದಕ್ಷಿಣ ಕರಾವಳಿ ತಮಿಳುನಾಡಿನಿಂದ ಈ ಚಂಡಮಾರುತದ ಪರಿಚಲನೆಯು ಉತ್ತರ ಒಳನಾಡು ವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿಮೀ ಎತ್ತರದಲ್ಲಿ ಹಾದು ಹೋಗಲಿದೆ.
ಸೈಕ್ಲೋನಿಕ್ ಪರಿಚಲನೆಯು ಉತ್ತರ ಕೇರಳ ಮತ್ತು ನೆರೆಹೊರೆಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಮೀ ಮತ್ತು 5.8 ಕಿಮೀ ಎತ್ತದಲ್ಲಿದೆ. ಪಶ್ಚಿಮ ವಿದರ್ಭದ ಮೇಲಿನ ಚಂಡಮಾರುತದ ಪರಿಚಲನೆಯಿಂದ ದಕ್ಷಿಣ ತಮಿಳುನಾಡಿನವರೆಗೆ ಮರಾಠವಾಡ ಮತ್ತು ಒಳನಾಡು ವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿದೆ ಎಂದು ಹವಾಮಾನ ಇಲಾಖೆ ವೈಪರಿತ್ಯಗಳ ಪ್ರಭಾವ, ಚಲನೆಯನ್ನು ಪತ್ತೆ ಮಾಡಿದೆ.
ರಾಜ್ಯದಲ್ಲಿ ಮೇ 25ರವರೆಗೆ ಭಾರೀ ಮಳೆ
ಚಂಡಮಾರುತ ಈ ತೀವ್ರತೆ ಕಾರಣದಿಂದ ಕರ್ನಾಟಕದಲ್ಲಿ ಮೇ 25ರವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುಂದುವರಿಯಲಿದೆ. ನಾಳೆ ಮೇ 21ರಂದು ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿಪರೀತ ಮಳೆ ಆಗಲಿದೆ. ಹೀಗಾಗಿ ಇವುಗಳಿಗೆ ನಾಳೆ ಒಂದು ದಿನ 'ಆರೆಂಜ್ ಅಲರ್ಟ್' ನೀಡಲಾಗಿದೆ.

ಇದೇ ವೇಳೆ ದಾವಣಗೆರೆ, ಗದಗ, ಧಾರವಾಡ, ಉತ್ತರ ಕನ್ನಡ, ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ಇವುಗಳಿಗೆ 'ಯೆಲ್ಲೋ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.
ನಂತರದ ನಾಲ್ಕು ದಿನಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಐದು ದಿನ ನಿರಂತರ ಮಳೆ ಆಗಲಿದೆ. ಉಡುಪಿಗೆ ಎರಡು ದಿನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಒಂದು ದಿನ ಬಿಟ್ಟು ದಿನ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಂದಜಿಸಿದೆ. ಈ ಜಿಲ್ಲೆಗಳಿಗೆ ಆಯಾ ದಿನಗಳಂದು 'ಯೆಲ್ಲೋ ಅಲರ್ಟ್' ನೀಡಲಾಗಿದೆ.
ಇಲ್ಲಿ ಸಾಧಾರಣದಿಂದ ಜೋರು ಮಳೆ ಸಂಭವ
ಈ ಮೇಲಿನ ಎಲ್ಲ ಜಿಲ್ಲೆಗಳ ಹೊರತುಪಡಿಸಿದರೆ ಉಳಿದ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಕೆಲವು ಕಡೆ ಹಗುರ ಮಳೆಯಾದರೆ, ಹಲವು ಕಡೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸದ್ಯ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳು, ಜಲಾಶಯಗಳಿಗೆ ಜೀವಕಳೆ ಬಂದಿದೆ. ಜನರಿಗೆ ತಾಪಮಾನದಿಂದ ಮುಕ್ತಿ ಸಿಕ್ಕಿದೆ. ಮತ್ತೊಂದೆಡೆ ರೈತರು ಮುಂಗಾರು ಬಿತ್ತನೆಗೆ ಸಜ್ಜಾಗುತ್ತಿದ್ದಾರೆ. ಈ ವರ್ಷ ಮುಂಗಾರು ಮಳೆ ಭರ್ಜರಿಯಾಗಿ ಸುರಿಯಲಿದೆ. ಹೆಚ್ಚು ಮಳೆ ನಿರೀಕ್ಷಿಸಲಾಗಿದೆ.
#ಮಳೆ #ಎಚ್ಚರಿಕೆ: 2024 ರ ಮೇ 20 ರಂದು ಕರಾವಳಿ ಜಿಲ್ಲೆಗಳಿಗೆ ಅಲ್ಲಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು (115.5-204.5 ಮಿಮೀ) ಮಳೆಯಾಗುವ ಸಾಧ್ಯತೆಯಿದೆ.#ವಸಂತಮಳೆ #ಪೂರ್ವಮುಂಗಾರು #KarnatakaRains #ಮುನ್ನೆಚ್ಚರಿಕೆವಹಿಸಿ@KarnatakaVarthe https://t.co/Oa60RcxTIv
— Karnataka State Natural Disaster Monitoring Centre (@KarnatakaSNDMC) May 20, 2024
ಮುಂಗಾರಿನ ದುರ್ಬಲ ಪ್ರವೇಶ
ಮುಂಗಾರು ಮಳೆ ಅಂಡಮಾನ್ ಹಾಗೂ ನಿಕೋಬಾರ್ ಮೂಲಕ ಹಾದು ಕೇರಳವನ್ನು ಒಂದೆರಡು ದಿನಗಳಲ್ಲಿ ಪ್ರವೇಶ ಮಾಡಲಿದೆ. ವಾಯುಭಾರ ಕುಸಿತದ ಪ್ರಭಾವದಿಂದಾಗಿ ಮುಂಗಾರು ಮಾರುತಗಳು ಅಷ್ಟಾಗಿ ಶಕ್ತಿಯುತವಾಗಿರದೇ, ದುರ್ಬಲವಾಗುತ್ತದೆ ಎಂದು ಐಎಂಡಿ ಹವಾಮಾನ ತಜ್ಞರು ಅಂದಾಜು ಮಾಡಿದ್ದಾರೆ.
ವಾಡಿಕೆಯಂತೆ ಮುಂಗಾರು ಮಳೆಯ ಆಗಮನವನ್ನು ನಿರೀಕ್ಷಿಸಲಾಗಿದೆ. ಜೂನ್ ಮೊದಲ ವಾರವೇ ಮುಂಗಾರು ಕರ್ನಾಟಕ ಸೇರಿದಂತೆ ದೇಶಾದ್ಯಂತ ವ್ಯಾಪ್ತಿಸುವ ಸಾಧ್ಯತೆ ಇದೆ.
ಸೋಮವಾರ ರಾಜ್ಯದ ಸುಮಾರು ಹದಿನೈದು ಜಿಲ್ಲೆಗಳಲ್ಲಿ ಮಳೆ ಆಗಿದ್ದು, ಹಲವೆಡೆ ಆವಾಂತರ ಸೃಷ್ಟಿ ಆಗಿವೆ. ಅಲ್ಲದೇ ಮಳೆಯಿಂದಾಗಿ ಇಬ್ಬರು ಸಾವಾಗಿದೆ. ಮಳೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳು ಸೇರಿ ವಿವಿಧೆಡೆ ನೆನ್ನೆ ಒಂದೇ ದಿನದಲ್ಲಿ ಭಾರೀ ಮಳೆ ಆಗಿದೆ.
ಕೇವಲ ಬೆಂಗಳೂರು, ಮಂಗಳೂರು, ಬೆಳಗಾವಿ, ಉಡುಪಿ, ಚಿಕ್ಕಮಗಳೂರು ಮಾತ್ರವಲ್ಲದೇ ಇದುವರೆಗೂ ಬಾರದ ಜಿಲ್ಲೆ, ತಾಲೂಕು ಪ್ರದೇಶಗಳಲ್ಲೂ ಉತ್ತಮ ಮಳೆ ಆಗಿದೆ. ರೈತರು ಕೃಷಿ ವ್ಯವಸಾಯ ಚಟುವಟಿಕೆಗಳಿಗೆ ಸಿದ್ಧತೆ ಆರಂಭಿಸಿದ್ದಾರೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು












Click it and Unblock the Notifications