Karnataka Rains: ಚಂಡಮಾರುತ ಪ್ರಸರಣ ಪ್ರಭಾವ: 3 ದಿನ ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ!
Karnataka Rains: ಸೈಕ್ಲೋನ್ ಎಫೆಕ್ಟ್ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಮುಂದಿನ ಮೂರು ದಿನಗಳ ಅವಧಿಗೆ ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು. ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಇನ್ನು ಧಾರಾಕಾರ ಮಳೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಕರ್ನಾಟಕದಲ್ಲಿ ವಾಯುಭಾರ ಕುಸಿತದಿಂದಾಗಿ ಮಳೆ ಮುಂದುವರಿದಿದೆ. ರಣಭೀಕರ ಮಳೆ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಕೊಡಲಾಗಿದೆ. ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ವಾಯುವ್ಯ ಬಂಗಾಳ ಕೊಲ್ಲಿ ಮತ್ತು ಉತ್ತರ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ರೂಪುಗೊಂಡಿದೆ, ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 9.6 ಕಿ.ಮೀ ವರೆಗೆ ವಿಸ್ತರಿಸಿದೆ. ಮುಂದಿನ 12-ಗಂಟೆಗಳಲ್ಲಿ ಇದು ಇನ್ನಷ್ಟು ತೀವ್ರವಾಗುವ ಸಾಧ್ಯತೆ ಇದೆ.

ಇನ್ನೂ ಮೂರು ದಿನ ಮಳೆ ಆರ್ಭಟ: ರಾಜ್ಯದಲ್ಲಿ ಬೆಂಗಳೂರು ನಗರ ಪ್ರದೇಶ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಮುಂದಿನ ಮೂರು ದಿನಗಳ ವರೆಗೆ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 21ಕ್ಕೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಕರಾವಳಿಯ ಜಿಲ್ಲೆಗಳಲ್ಲಿ ರಣಭೀಕರ ಮಳೆ ಇರಲಿದ್ದು ರೆಡ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 21ರ ಗುರುವಾರದಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರೆಡ್ ಅಲರ್ಟ್: ಸಾಮಾನ್ಯವಾಗಿ ನಿರೀಕ್ಷೆಗೂ ಮೀರಿ ಅಥವಾ ಭಾರೀ ಮಳೆ ಆಗುವ ಸಾಧ್ಯತೆ ಇರುವ ಸಂದರ್ಭಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗುತ್ತದೆ. ಇದೀಗ ಕರ್ನಾಟಕದ ಮೂರು ಪ್ರಮುಖ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಕೊಡಲಾಗಿದೆ. ಅದರಲ್ಲಿ ಬೆಳಗಾವಿ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಸೇರಿವೆ. ಇದರೊಂದಿಗೆ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಇದೆ. ಇದರ ಹೊರತಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.
JOG FALLS will be in al glory as Karnataka’s largest Dam Linganamakki has opened its crest gates.
— ರವಿ ಕೀರ್ತಿ ಗೌಡ (@ravikeerthi22) August 19, 2025
Around 14,000 cusecs flowing to river. https://t.co/OsL3qOGkv2
ಮೀನುಗಾರರಿಗೆ ಎಚ್ಚರಿಕೆ: ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮುಂದಿನ ಮೂರು ದಿನಗಳ ಅವಧಿಯಲ್ಲಿ ಸಮುದ್ರದ ಅಲೆಗಳು ವೇಗವಾಗಿ ಇರಲಿವೆ. ಅಲ್ಲದೇ ಗಾಳಿಯ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಇರಲಿದ್ದು, ಈ ಸಂದರ್ಭದಲ್ಲಿ ಮೀನಗಾರರು ಎಚ್ಚರಿಕೆ ವಹಿಸಬೇಕು ಹಾಗೂ ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.












Click it and Unblock the Notifications