Karnataka Rains: ರಾಜ್ಯದ ಮುಂದಿನ 5 ದಿನಗಳ ಹವಾಮಾನ ವರದಿ

Karnataka Rains: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೇಸಿಗೆಗೂ ಮುನ್ನವೇ ರಣ ಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ತುಂತುರು ಮಳೆಯಾಗುತ್ತಿದೆ. ಹಾಗೆಯೇ ಇಂದು (ಫೆಬ್ರವರಿ 23) ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಜಿನುಗು ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಮುಂದಿನ ಹವಾಮಾನ ಹೇಗಿರಲಿದೆ ಎಂಬ ಮಾಹಿತಿಯನ್ನು ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದ, 8 ಗಂಟೆ ಬಳಿಕ ಬಿಸಿಲು ಮುಂದುವರೆದಿದೆ. ಮಧ್ಯಾಹ್ನದ ವೇಳೆಗೆ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹೀಗೆಯೇ ಬಹುತೇಕ ಜಿಲ್ಲೆಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದ ಎಂದು ತಿಳಿಸಿದೆ. ಈ ನಡುವೆಯೂ ಬಂಗಾಲಕೊಲ್ಲೆಯಲ್ಲಿ ಚಂಡಮಾರುತದ ಪರಿಚಲನೆ ಹಿನ್ನೆಲೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

Karnataka Rains Know Next 5 Days Weather Forecast of state

ಹಾಗೆಯೇ ಮುಂದಿನ 5 ದಿನಗಳವರೆಗೆ ರಾಜ್ಯದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಉತ್ತರ ಒಳನಾಡಿನ ಕರ್ನಾಟಕದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3°C, ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ 1-2°C ಮತ್ತು ಕರಾವಳಿ ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ. ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಕೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಈಗಾಗಲೇ ಕಾರವಾರದಲ್ಲಿ ಅತೀ ಹೆಚ್ಚಿನ ಪ್ರಮಾಣದ ತಾಪಮಾನ ದಾಖಲಾಗಿದೆ. ಕರಾವಳಿ ಕರ್ನಾಟಕದ ಹೊನ್ನಾವರ, ಮಂಗಳೂರು ವಿಮಾನ ನಿಲ್ದಾಣ ಮತ್ತು ಪಣಂಬೂರು, ಹಾಗೆಯೇ ಬೆಳಗಾವಿ ವಿಮಾನ ನಿಲ್ದಾಣ, ಬಾಗಲಕೋಟೆ ಮತ್ತು ಹಾವೇರಿ, ದಾವಣಗೆರೆ, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ ಮತ್ತು ಹಾಸನ, ಕಲಬುರಗಿ, ವಿಜಯಪುರ ಮತ್ತು ರಾಯಚೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಕೊಪ್ಪಳ ಮತ್ತು ಹಾವೇರಿಯಲ್ಲಿ 34-35°C ಮತ್ತು ಉತ್ತರ ಆಂತರಿಕ ಕರ್ನಾಟಕದ ಗದಗ, ಕಲಬುರಗಿ, ಬಾಗಲಕೋಟೆ ಮತ್ತು ರಾಯಚೂರಿನಲ್ಲಿ 36-38°C, ಚಿಕ್ಕಮಗಳೂರು, ಬೆಂಗಳೂರು, ಚಿಕ್ಕಮಗಳೂರು, ಚಿಕ್ಕಮಗಳೂರು, 31-33°C, ಚಿಂತಾಮಣಿ ಮತ್ತು ಮಡಿಕೇರಿ ಮತ್ತು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗದಲ್ಲಿ 34-36°Cಗೆ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ.

ಮತ್ತೊಂದೆಡೆ ಈ ಬಾರಿ ರಾಜ್ಯಕ್ಕೆ ಏಪ್ರಿಲ್‌-ಮೇ ತಿಂಗಳಿನಲ್ಲೇ ಮುಂಗಾರು ಎಂಟ್ರಿ ಕೊಡಲಿದೆ ಎನ್ನುವ ಮಾಹಿತಿ ಇದೆ. ಈ ಹಿನ್ನೆಲೆ ಬೇಸಿಗೆಗೂ ಮುನ್ನವೇ ಅಂದರೆ ಈಗಿನಿಂದಲೇ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎನ್ನುವ ಮಾಹಿತಿ ಇದೆ. ಕಳೆದ ಬಾರಿ ಅಂದರೆ 2024ರ ಜೂನ್‌ ಆರಂಭದಲ್ಲೇ ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟ ಪರಿಣಾಮ ಪ್ರಮುಖ ಜಲಾಶಯಗಳು, ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದಿದ್ದು, ಉತ್ತಮ ಬೆಳೆಗಳು ಆಗಿದ್ದವು. ಇದರಿಂದ ಅನ್ನದಾತನ ಮುಖದಲ್ಲಿ ಮಂದಹಾಸ ಚಿಗುರೊಡೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+