Karnataka Rains: ಸೈಕ್ಲೋನ್ ಪ್ರಭಾವ: ರಾಜ್ಯದಲ್ಲಿ ಇನ್ನೊಂದು ವಾರ ಧಾರಾಕಾರ ಮಳೆ, ಆರೆಂಜ್ ಅಲರ್ಟ್!
Karnataka Rains May 08: ಸೈಕ್ಲೋನ್ ಪ್ರಭಾವದಿಂದಾಗಿ ರಾಜ್ಯದಲ್ಲಿ ಇನ್ನೊಂದು ವಾರ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದಲೂ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಅಲ್ಪ ಪ್ರಮಾಣದ ಮಳೆಯಾಗಿತ್ತು. ಬಿಸಿಲ ಝಳ ಹೆಚ್ಚಾಗಿತ್ತು. ಇದೀಗ ಸೈಕ್ಲೋನ್ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಐಎಂಡಿ ಹೇಳಿದ್ದು. ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಸೈಕ್ಲೋನ್ ಎಫೆಕ್ಟ್‌ನಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮೇ 13ರ ವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಹೇಳಿದೆ. ಯಾವ ಜಿಲ್ಲೆಗಳಲ್ಲಿ ಯಾವ ದಿನ ಮಳೆ ಬರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಉತ್ತರ ಪ್ರದೇಶದಿಂದ ತಮಿಳುನಾಡಿನ ವರೆಗೆ ವಾಯುಭಾರ ಕುಸಿತ ಉಂಟಾಗಿದ್ದು. ಬೆಂಗಳೂರು ಸೇರಿದಂತೆ ಕರ್ನಾಟಕದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಬೆಂಗಳೂರು, ದಕ್ಷಿಣ ಕನ್ನಡ ಹಾಗೂ ಹಾಸನದಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ರಾಜ್ಯದಲ್ಲಿ ಪೂರ್ವ ಮುಂಗಾರಿನಿಂದ ಭಾರೀ ಮಳೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ವಾಯುಭಾರ ಕುಸಿತವೂ ಆಗಿರುವುದರಿಂದ ಮಳೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಹೇಳಲಾಗಿದೆ.
ಇನ್ನೆರಡು ದಿನ ಭಾರೀ ಮಳೆ: ಇನ್ನು ರಾಜ್ಯದಲ್ಲಿ ಮೇ 13ರ ವರೆಗೆ ಭಾರೀ ಮಳೆ ಮುಂದುವರಿಯಲಿದೆ. ಮೇ 8 & 9ರಂದು ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ರಿಪೋರ್ಟ್ ತಿಳಿಸಿದೆ.
ಮೇ 08: ಇಂದು ರಾಜ್ಯದ ವಿವಿಧೆಡೆ ಭಾರೀ ಮಳೆ ಆಗಲಿದೆ. ಇನ್ನು ದಕ್ಷಿಣ ಒಳನಾಡು ಹಾಗೂ ಮಲೆನಾಡಿನಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಹಾಸನ ಹಾಗೂ ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದೆ. ಮಂಡ್ಯ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಪ್ರದೇಶ, ರಾಮನಗರ, ಬಳ್ಳಾರಿ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರದಲ್ಲಿ ಮಳೆಯಾಗಲಿದೆ.
ಗಾಳಿಯ ವೇಗವು 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಉಳಿದಂತೆ ಬೀದರ, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಬಿಸಿಲು ಇರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಇರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಧಾರಾಕಾರ ಮಳೆಯಾಗಲಿದೆ.
ಇನ್ನು ಮೇ 9ರಿಂದ 13ರ ವರೆಗೆ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.












Click it and Unblock the Notifications