Karnataka Rains: 5 ದಿನದ ಹವಾಮಾನ ಮುನ್ಸೂಚನೆ; ಭೀಕರ ಚಳಿ ನಡುವೆಯೂ ಕೆಲವೇ ಜಿಲ್ಲೆಗಳಲ್ಲಿ ತುಂತುರು ಮಳೆ
Karnataka Rains: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟಿಸಿ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ರಣಭೀಕರ ಚಳಿ, ದಟ್ಟ ಮಂಜಿನ ನಡುವೆ ಹಲವೆಡೆ ತುಂತುರು ಮಳೆ ಮುಂದುವರೆದಿದೆ. ಹಾಗಾದರೆ ರಾಜ್ಯದಲ್ಲಿ ಮುಂದಿನ 5 ದಿನ ಹವಾಮಾನ ಹೇಗಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 30) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಬೆಳಗ್ಗೆ 10 ಆಗುತ್ತಿದ್ದಂತೆ ಸೂರ್ಯ ಎಂಟ್ರಿ ಕೊಟ್ಟಿದ್ದಾನೆ. ಇನ್ನು ಸಂಜೆ ಅಥವಾ ರಾತ್ರಿ ವೇಳೆಗೆ ನಗರದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬೆಳಗ್ಗೆ ವೇಳೆ ಸಾಧಾರಣ ಹಾಗೂ ಕೆಲವೆಡೆ ದಟ್ಟ ಮಂಜು ಆವರಿಸುವ ಸಾಧ್ಯತೆಯಿದೆ. ಇನ್ನೂ ಕೆಲವೇ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಕೆಲವೆಡೆ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 5 ದಿನಗಳ ಮಳೆ ಮುನ್ಸೂಚನೆ: ಮುಂದಿನ 5 ದಿನ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಭೀಕರ ಚಳಿ ನಡುವೆಯೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ರಾಜ್ಯದ ಬಹುತೇಕ ಕಡೆಗಳಲ್ಲಿ ಒಳ ಹವೆಯಿರುವ ಸಾಧ್ಯತೆಯಿದ್ದು, ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂಜಾನೆ ಸಾಧಾರಣ ಹಾಗೂ ಕೆಲವೆಡೆ ದಟ್ಟ ಮಂಜು ಆವರಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆ ದಟ್ಟ ಮಂಜಿನ ನಡುವೆ ಚಳಿ ಇರಲಿದೆ ಎಂದು ತಿಳಿಸಿದೆ.
ಹಾಗೆಯೇ ಮತ್ತೊಂದೆಡೆ, ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಗುಲ್ಬರ್ಗಾ, ಕೊಪ್ಪಳ ಮತ್ತು ರಾಯಚೂರಿನ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಚಳಿ ಇರಲಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications