Karnataka Rains: ಮುಂದಿನ 48ಗಂಟೆ ಈ ಜಿಲ್ಲೆಗಳಿಗೆ 200ಮಿಮಿ.ಗೂ ಅಧಿಕ ಭಾರೀ ಮಳೆ, 'ರೆಡ್ ಅಲರ್ಟ್'
ಬೆಂಗಳೂರು, ಜುಲೈ 05: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವೈಪರಿತ್ಯಗಳ ಏರಿಳಿತ ಮುಂದುವರಿದಿದೆ. ಇದರ ಪರಿಣಾಮವಾಗಿ ಮುಂಗಾರು ಮಳೆ ಆರ್ಭಟ ಸಹ ಮುಂದುವರಿಯುತ್ತಿದೆ. ಇದೀಗ ಮತ್ತೆ ಭರ್ಜರಿ ಮಳೆ ಸುರಿಯುವ ಮುನ್ಸೂಚನೆ ಇದ್ದ ವಿವಿಧ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಲಾಗಿದೆ.
ಎರಡು ವಾರದಿಂದ ಹಿಂದೆ ನಿರಂತರವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಲಾಗಿತ್ತು. ಅಂದಿನಂತೆ ಇಂದು ಸಹ ವಾತಾವರಣದಲ್ಲಿ ಹಲವಾರು ಬದಲಾವಣೆಗಳು ಆಗಿವೆ. ಈ ಕಾರಣದಿಂದಾಗಿ ಮುಂದಿನ 48 ಗಂಟೆಗಳ ಕಾಲ 200 ಮೀಟರ್‌ಗೂ ಹೆಚ್ಚು ಮಳೆ ಸಂಭವವಿದೆ.

ಹವಾಮಾನ ಬದಲಾವಣೆಯ ಪ್ರಭಾವ
ಸದ್ಯ ಕರ್ನಾಟಕ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಸ್ಟ್ರಫ್-ಸುಳಿಗಾಳಿಯು ಮಹಾರಾಷ್ಟ್ರ, ಗುಜರಾತ್ ಕರಾವಳಿ ವರೆಗೂ ಪ್ರಭಾವ ಬೀರಿದೆ. ಇದರ ಪರಿಣಾಮವಾಗಿ ಮುಂದಿನ ಎರಡು ದಿನಗಳ ಕಾಲ ಜೋರು ಕರ್ನಾಟಕದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು (ಜುಲೈ 7ರವರೆಗೆ) ಅತ್ಯಧಿಕ ಮಳೆ ಬರುವ ಪ್ರಯುಕ್ತ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಜುಲೈ 7ರ ನಂತರ ಕರಾವಳಿಯ ಮೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಮೂರು ದಿನ 'ಯೆಲ್ಲೋ ಅಲರ್ಟ್' ಕೊಡಲಾಗಿದೆ ಎಂದು ಶುಕ್ರವಾರದ ಐಎಂಡಿ ಮುನ್ಸೂಚನೆ ತಿಳಿಸಿದೆ.
ಒಳನಾಡು ಜಿಲ್ಲೆಗಳಿಗೆ ಸಾಮಾನ್ಯ ಮಳೆ
ಇನ್ನೂ ಇದೇ ವೇಳೆ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಕೋಲಾರ, ರಾಮನಗರ, ಹಾಸನ, ಕೊಡಗು, ತುಮಕೂರು, ದಾವಣಗೆರೆ, ಬಳ್ಳಾರಿ ಹಾಗೂ ಇನ್ನಿತರ ಕಡೆಗಳಲ್ಲಿ ಆಗಾಗ ಹಗುರದಿಂದ ಸಾಧಾರಣವಾಗಿ ಮಳೆ ಬರುವ ಮುನ್ಸೂಚನೆ ನೀಡಲಾಗಿದೆ.
ಇನ್ನೂ ಉತ್ತರ ಕರ್ನಾಟಕದಲ್ಲಿ ಕೆಲವು ಕಡೆಗಳಲ್ಲಿ ಮಾತ್ರವೇ ಮಳೆ ಆಗುತ್ತಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆಯಲ್ಲಿ ಸಾಮಾನ್ಯ ಮಳೆ ಕಂಡು ಬಂದಿದೆ. ಹಾವೇರಿ, ಗದಗ, ಕೊಪ್ಪಳದಲ್ಲಿ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯ ಸದ್ಯಕ್ಕೆ ಮಳೆ ಕೊರತೆ ಕಂಡು ಬಂದಿದೆ.
ಇನ್ನು ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಚಳಿಯ ವಾತಾವರಣ ಜೊತೆಗೆ ಆಗಾಗ ಜಡಿ ಮಳೆಯ ಸುರಿಯುತ್ತಿದೆ. ಶುಕ್ರವಾರ ಸಂಜೆ ಹಲವು ಕಡೆಗಳಲ್ಲಿ ಜೋರು ಮಳೆ ಆಗಿದೆ. ಇಲ್ಲಿ ಸಹ ಮುಂದಿನ ಒಂದು ವಾರ ಇದೇ ರೀತಿ ವಾತಾವರಣ ಮುಂದುವರಿಯಲಿದೆ. ಜೊತೆಗೆ ಆಗಾಗ ಬಿಸಿಲಿನ ದರ್ಶನವು ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ











Click it and Unblock the Notifications