ಕರ್ನಾಟಕ ಮಳೆ: 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು, ಜುಲೈ 30: ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Recommended Video

      ಏನಿದು ಹೊಸ ಶಿಕ್ಷಣ ರೀತಿ?ಏನಿದು ಹೊಸ ಸಚಿವಾಲಯ ಬದಲಾವಣೆ? | Oneindia Kannada

      ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಗುರುವಾರ ಆರೆಂಜ್ ಅಲರ್ಟ್ ನೀಡಲಾಗಿದೆ.

      ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಚಾಮರಾಜನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲೂ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

       ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ

      ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ

      ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ, ಗರಿಷ್ಠ 3.2 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ ಹೀಗಾಗಿ ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

       ಎಲ್ಲಿ, ಎಷ್ಟು ಮಳೆಯಾಗಿದೆ

      ಎಲ್ಲಿ, ಎಷ್ಟು ಮಳೆಯಾಗಿದೆ

      ಬೀದರ್ ಜಿಲ್ಲೆಯ ಔರಾದ್‌ನಲ್ಲಿ ಗರಿಷ್ಠ 7 ಸೆಂ.ಮೀ, ಕಂಪ್ಲಿ 5, ಶ್ರೀರಂಗಪಟ್ಟಣ 4, ಬೀದರ್ 3, ಮಂಗಳೂರು, ಕುಂದಾಪುರ , ಮೈಸೂರು, ಮಂಡ್ಯ,ಮಳವಳ್ಳಿ, ಮಾಗಡಿ 2, ಅಂಕೋಲಾ, ಮೂಡುಬಿದಿರೆ, ರಾಯಚೂರು, ಚಿಂಚೋಳಿ, ಕೊಳ್ಳೇಗಾಲ, ಗೌರಿಬಿದನೂರು, ಟಿ ನರಸೀಪುರ, ಬೆಲೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

       ಉತ್ತರ ಕರ್ನಾಟಕದಲ್ಲೂ ಮಳೆ ಬಿರುಸು

      ಉತ್ತರ ಕರ್ನಾಟಕದಲ್ಲೂ ಮಳೆ ಬಿರುಸು

      ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಮತ್ತು ಗದಗ ಜಿಲ್ಲೆಯಲ್ಲಿ ಬುಧವಾರ ಭರ್ಜರಿ ಮಳೆಯಾಗಿದೆ. ಹಲವಾರು ಮನೆಗಳಿಗೆ ನೀರು ನುಗ್ಗಿ ಜನರು ರಾತ್ರಿ ಇಡೀ ಆತಂಕದಲ್ಲಿಯೇ ಕಳೆದ ಘಟನೆ ನಡೆದಿದೆ.ವಿವಿಧೆಡೆ ನೀರಿನ ಹರಿವು ಹೆಚ್ಚಾಗಿದ್ದರಿಂದ ಸಂಪರ್ಕದ ರಸ್ತೆಗಳು ಕಡಿತಗೊಂಡಿದ್ದವು. ಕಲಬುರಗಿಯಲ್ಲಿ ಸಂಜೆ ವೇಳೆ ಒಂದು ಗಂಟೆಗೂ ಅಧಿಕ ಕಾಲ ರಭಸದ ಮಳೆ ಸುರಿದಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು.

       ಮುಂದಿನ ಮೂರು ದಿನ ಭಾರಿ ಮಳೆಯ ಎಚ್ಚರಿಕೆ

      ಮುಂದಿನ ಮೂರು ದಿನ ಭಾರಿ ಮಳೆಯ ಎಚ್ಚರಿಕೆ

      ದಕ್ಷಿಣ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡಿಗೆ ಹೊಂದಿಕೊಂಡಿರುವ ಕರಾವಳಿ ಭಾಗದ ಬಂಗಾಳಕೊಲ್ಲಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಮುಂದಿನ ಮೂರು ದಿನ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

      ಮುಂದಿನ ಮೂರು ದಿನ ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆ ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+