ರಾಜ್ಯಸಭೆ ಚುನಾವಣೆ 2018 : ಕರ್ನಾಟಕದಲ್ಲಿ ಗೆದ್ದವರು, ಸೋತವರು

Posted By: Gururaj
Subscribe to Oneindia Kannada

ಬೆಂಗಳೂರು, ಮಾರ್ಚ್ 23 : ಕರ್ನಾಟಕ ವಿಧಾನಸಭೆಯಿಂದ 4 ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಕಾಂಗ್ರೆಸ್ ಪಕ್ಷದ 3, ಬಿಜೆಪಿಯ ಒಬ್ಬ ಅಭ್ಯರ್ಥಿ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.

ಶುಕ್ರವಾರ ಸಂಜೆ 4 ಗಂಟೆಗೆ ಮತದಾನ ಮುಕ್ತಾಯಗೊಂಡಿತು. ಬಳಿಕ ಮತ ಎಣಿಕೆ ಪ್ರಕ್ರಿಯೆ ಆರಂಭವಾಯಿತು. 8.30ಕ್ಕೆ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ.

ರಾಜ್ಯಸಭಾ ಚುನಾವಣೆ: 217 ಅರ್ಹ ಮತಗಳ ಪೈಕಿ 188 ಮತಗಳ ಚಲಾವಣೆ

ವಿಧಾನಸೌಧದ 1ನೇ ಮಹಡಿಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಜೀವ್ ಚಂದ್ರಶೇಖರ್‌ 50 ಮತಗಳನ್ನು ಪಡೆದು ಜಯಗಳಿಸಿದರು.

ರಾಜ್ಯಸಭೆ ಚುನಾವಣೆ 2018 : ರಾಜೀವ್ ಚಂದ್ರಶೇಖರ್‌ಗೆ ಜಯ

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಾದ ಡಾ.ಎಲ್.ಹನುಮಂತಯ್ಯ 44, ನಾಸೀರ್ ಹುಸೇನ್ 42 ಮತ್ತು ಜಿ.ಸಿ.ಚಂದ್ರಶೇಖರ್ 46 ಮತಗಳನ್ನು ಪಡೆದು ಜಯಗಳಿಸಿದರು.

ರಾಜ್ಯಸಭಾ ಚುನಾವಣೆ LIVE: ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ

Rajya Sabha

ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಬಿ.ಎಂ.ಫಾರೂಕ್‌ ಕೇವಲ 2 ಮತಗಳನ್ನು ಪಡೆದು ಸೋಲು ಅನುಭವಿಸಿದರು. ಜೆಡಿಎಸ್ ಪಕ್ಷ ರಾಜ್ಯಸಭೆ ಚುನಾವಣೆಯನ್ನು ಬಹಿಷ್ಕಾರ ಮಾಡಿತ್ತು.

ಕಾಗೋಡು ತಿಮ್ಮಪ್ಪ ಮತ್ತು ಬಾಬುರಾವ್ ಚಿಂಚನಸೂರ್ ಅವರಿಗೆ ಎರಡು ಬಾರಿ ಮತಪತ್ರ ನೀಡಿದ್ದಕ್ಕೆ ಜೆಡಿಎಸ್ ವಿರೋಧ ವ್ಯಕ್ತಪಡಿಸಿತ್ತು. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು ಮತ್ತು ಮತದಾನ ಬಹಿಷ್ಕಾರ ಮಾಡಿತ್ತು.

ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಕಾಗೋಡು ತಿಮ್ಮಪ್ಪ ಮತ್ತು ಬಾಬುರಾವ್ ಚಿಂಚನಸೂರ್ ಅವರ ಮತಪತ್ರಗಳನ್ನು ಹೊರಗಿಟ್ಟು ಮತಎಣಿಕೆ ನಡೆಸಲಾಯಿತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Rajya Sabha election held on March 23, 2018 for 58 seats from 16 states including 4 seats of Karnataka. Here are the result of Karnataka state.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ