ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಸಭೆ ಚುನಾವಣೆ 2018 : ಕರ್ನಾಟಕದಲ್ಲಿ ಗೆದ್ದವರು, ಸೋತವರು

|
Google Oneindia Kannada News

ಬೆಂಗಳೂರು, ಮಾರ್ಚ್ 23 : ಕರ್ನಾಟಕ ವಿಧಾನಸಭೆಯಿಂದ 4 ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಕಾಂಗ್ರೆಸ್ ಪಕ್ಷದ 3, ಬಿಜೆಪಿಯ ಒಬ್ಬ ಅಭ್ಯರ್ಥಿ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.

ಶುಕ್ರವಾರ ಸಂಜೆ 4 ಗಂಟೆಗೆ ಮತದಾನ ಮುಕ್ತಾಯಗೊಂಡಿತು. ಬಳಿಕ ಮತ ಎಣಿಕೆ ಪ್ರಕ್ರಿಯೆ ಆರಂಭವಾಯಿತು. 8.30ಕ್ಕೆ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ.

ರಾಜ್ಯಸಭಾ ಚುನಾವಣೆ: 217 ಅರ್ಹ ಮತಗಳ ಪೈಕಿ 188 ಮತಗಳ ಚಲಾವಣೆರಾಜ್ಯಸಭಾ ಚುನಾವಣೆ: 217 ಅರ್ಹ ಮತಗಳ ಪೈಕಿ 188 ಮತಗಳ ಚಲಾವಣೆ

ವಿಧಾನಸೌಧದ 1ನೇ ಮಹಡಿಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಜೀವ್ ಚಂದ್ರಶೇಖರ್‌ 50 ಮತಗಳನ್ನು ಪಡೆದು ಜಯಗಳಿಸಿದರು.

ರಾಜ್ಯಸಭೆ ಚುನಾವಣೆ 2018 : ರಾಜೀವ್ ಚಂದ್ರಶೇಖರ್‌ಗೆ ಜಯ

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಾದ ಡಾ.ಎಲ್.ಹನುಮಂತಯ್ಯ 44, ನಾಸೀರ್ ಹುಸೇನ್ 42 ಮತ್ತು ಜಿ.ಸಿ.ಚಂದ್ರಶೇಖರ್ 46 ಮತಗಳನ್ನು ಪಡೆದು ಜಯಗಳಿಸಿದರು.

ರಾಜ್ಯಸಭಾ ಚುನಾವಣೆ LIVE: ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟರಾಜ್ಯಸಭಾ ಚುನಾವಣೆ LIVE: ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ

Rajya Sabha

ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಬಿ.ಎಂ.ಫಾರೂಕ್‌ ಕೇವಲ 2 ಮತಗಳನ್ನು ಪಡೆದು ಸೋಲು ಅನುಭವಿಸಿದರು. ಜೆಡಿಎಸ್ ಪಕ್ಷ ರಾಜ್ಯಸಭೆ ಚುನಾವಣೆಯನ್ನು ಬಹಿಷ್ಕಾರ ಮಾಡಿತ್ತು.

ಕಾಗೋಡು ತಿಮ್ಮಪ್ಪ ಮತ್ತು ಬಾಬುರಾವ್ ಚಿಂಚನಸೂರ್ ಅವರಿಗೆ ಎರಡು ಬಾರಿ ಮತಪತ್ರ ನೀಡಿದ್ದಕ್ಕೆ ಜೆಡಿಎಸ್ ವಿರೋಧ ವ್ಯಕ್ತಪಡಿಸಿತ್ತು. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು ಮತ್ತು ಮತದಾನ ಬಹಿಷ್ಕಾರ ಮಾಡಿತ್ತು.

ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಕಾಗೋಡು ತಿಮ್ಮಪ್ಪ ಮತ್ತು ಬಾಬುರಾವ್ ಚಿಂಚನಸೂರ್ ಅವರ ಮತಪತ್ರಗಳನ್ನು ಹೊರಗಿಟ್ಟು ಮತಎಣಿಕೆ ನಡೆಸಲಾಯಿತು.

English summary
Rajya Sabha election held on March 23, 2018 for 58 seats from 16 states including 4 seats of Karnataka. Here are the result of Karnataka state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X