ನಾಳೆ ರಾಜ್ಯಸಭೆ ಎಲೆಕ್ಷನ್: 3 ಪಕ್ಷಕ್ಕೂ ಅಡ್ಡ ಮತ ಭೀತಿ: ರೆಸಾರ್ಟ್ ರಾಜಕಾರಣ ಶುರು?
ಬೆಂಗಳೂರು ಫೆಬ್ರವರಿ 26: ಬೆಂಗಳೂರು ರಾಜ್ಯ ವಿಧಾನಸಭೆಯಿಂದ ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ಚುನಾವಣೆ ನಡೆಯಲಿದ್ದು, ಅಡ್ಡ ಮತದಾನ ತಪ್ಪಿಸಲು ಪಕ್ಷಗಳು ತೀವ್ರ ಕಟ್ಟೆಚ್ಚರ ವಹಿಸಿವೆ. ಮೂರು ಪಕ್ಷಗಳೂ ತಮ್ಮ ಶಾಸಕರ ಮತಗಳನ್ನು ಭದ್ರಪಡಸಿಕೊಳ್ಳುವುದರ ಜೊತೆಗೆ ಹೆಚ್ಚುವರಿ ಮತಗಳಿಗೆ ಕೈಹಾಕಿವೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಶಾಸಕರೊಂದಿಗೆ ಸೋಮವಾರವೇ ಖಾಸಗಿ ಹೋಟೆಲ್‌ಗೆ ಶಿಪ್ಟ್ ಆಗಲಿದೆ. ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರನ್ನೂ ಹೋಟೆಲ್ ಅಥವಾ ರೆಸಾರ್ಟ್ಗೆ ಸ್ಥಳಾಂತರಗೊಳಿಸುವ ಬಗ್ಗೆ ಚಿಂತನೆ ನಡೆದಿವೆ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ ಆರಂಭವಾಗಲಿರುವ ಸದನ ಕಲಾಪದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯ್ಕೆ ಅವರ ನಿಧನಕ್ಕೆ ಸಂತಾಪ ಸೂಚನೆ ನಿರ್ಣಯ ಮಂಡಿಸಲಾಗುತ್ತದೆ. ಬಳಿಕ ಕಲಾಪವನ್ನು ಬುಧವಾರಕ್ಕೆ ಮುಂದೂಡಲಿದ್ದು ತಕ್ಷಣ ಕಾಂಗ್ರೆಸ್ ವಿಧಾನ ಸೌಧದಲ್ಲೇ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ. ಬಳಿಕ ಖಾಸಗಿ ಹೋಟೆಲ್‌ಗೆ ಶಾಸಕರು ಸ್ಥಳಾಂತರಗೊಳ್ಳಲಿದ್ದಾರೆ.
ಮಂಗಳವಾರ ನೇರವಾಗಿ ಮತದಾನ ನಡೆಯಲಿರುವ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ಮಂಗಳವಾರ ನಡೆಯಲಿರುವ ರಾಜಾ ವೆಂಕಟಪ್ಪ ನಾಯ್ಕ್ ಅವರ ಅಂತ್ಯಕ್ರಿಯೆಗೂ ಸೀಮಿತ ನಾಯಕರು ಮಾತ್ರ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂಖ್ಯಾಬಲ:
ಸಂಖ್ಯಾಬಲವನ್ನು ನೋಡುವುದಾದರೆ 224 ಶಾಸಕರಲ್ಲಿ ಕಾಂಗ್ರೆಸ್ 135, ಬಿಜೆಪಿ 66, ಜೆಡಿಎಸ್ 19, ಸರ್ವೋದಯ ಕರ್ನಾಟಕ 1, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) 1, ಪಕ್ಷೇತರರಲ್ಲಿ ಇಬ್ಬರು ಶಾಸಕರಿದ್ದಾರೆ.
ಹೋಟೆಲ್ ರಾಜಕಾರಣ:
ಕಾಂಗ್ರೆಸ್‌ನಿಂದ ಜಿ.ಸಿ.ಚಂದ್ರಶೇಖರ್, ಸಯ್ಯದ್ ನಾಸಿರ್ ಹುಸೇನ್, ಕೇಂದ್ರದ ಮಾಜಿ ಸಚಿವ ಅಜಯ್ ಮಾಕನ್, ಬಿಜೆಪಿಯಿಂದ ನಾರಾಯಣಸಾ ಭಾಂಡಗೆ, ಜೆಡಿಎಸ್‌ನಿಂದ ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.
ಕಾಂಗ್ರೆಸ್‌ಗೆ ಈ ಹಿಂದೆ ವಿಧಾನಪರಿಷತ್ ಚುನಾವಣೆಗಳಲ್ಲಿ ಅಡ್ಡಮತದಾನದ ಬಿಸಿತಾಗಿದೆ. ಹೀಗಾಗಿ ಚುನಾವಣೆಗೂ ಒಂದು ದಿನ ಮೊದಲೇ ಯಾವ ಶಾಸಕರು ಯಾವ ಅಭ್ಯರ್ಥಿಗೆ ಮತ ಹಾಕಬೇಕು ಎಂಬುದನ್ನು ಸ್ಪಷ್ಟವಾಗಿ ಸೂಚಿಸಲಾಗುವುದು. ಪ್ರಥಮ ಪ್ರಶಸ್ತ್ಯದ ಮತವನ್ನು ಯಾವ ಅಭ್ಯರ್ಥಿಗೆ ಹಾಕಬೇಕು? ದ್ವಿತೀಯ ಪ್ರಾಶಸ್ತ್ಯದ ಮತ ಯಾವ ಅಭ್ಯರ್ಥಿಗೆ ಹಾಕಬೇಕು ಎಂಬುದನ್ನು ಸೂಚಿಸಲಾಗುವುದು.
ಮಂಗಳವಾರ ನಡೆಯಲಿರುವ ಮತದಾನದ ವೇಳೆ ಪ್ರತಿ ಅಭ್ಯರ್ಥಿಯ ಮತದಾನದ ವೇಳೆ ಪ್ರತಿ ಅಭ್ಯರ್ಥಿಯ ಗೆಲುವಿಗೆ 45 ಮಂದಿ ಶಾಸಕರ ಮತಗಳ ಅಗತ್ಯವಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪ್ರತಿ ಅಭ್ಯರ್ಥಿಗೆ 46 ಮತ ಹಾಕಿಸಲು ಕಾಮಗ್ರೆಸ್ ನಿರ್ಧರಿಸಿದೆ.
ಮೈತ್ರಿ ನಡೆ ಏನು?
ಬಿಜೆಪಿ ಹಾಗೂ ಜೆಡಿಎಸ್ ಕೂಡ ಅಡ್ಡಮತದಾನದ ಬಗ್ಗೆ ಎಚ್ಚರದ ಹೆಜ್ಜೆಯನ್ನು ಇಟ್ಟಿವೆ. ಬಿಜೆಪಿಗೆ ಒಂದು ಸ್ಥಾನವನ್ನು ನಿರಾಯಾಸವಾಗಿ ಗೆಲ್ಲಬಲ್ಲಸಂಖ್ಯಾಬಲ ಇದೆ. ಆದರೆ ಮೈತ್ರಿಯ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದು ಅವರಿಗೆ 5-6 ಮತಗಳ ಕೊರತೆ ಎದುರಾಗಲಿದೆ. ಆತ್ಮಸಾಕ್ಷಿ ಮತಗಳ ನಿರೀಕ್ಷೆಯಲ್ಲೇ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ಅಡ್ಡಮತದಾನಕ್ಕಾಗಿ ಕಾಂಗ್ರೆಸ್ ಹಾಗೂ ಪಕ್ಷೇತರ ಮತಗಳಿಗೆ ಬಲೆ ಬೀಸುವ ಸಾಧ್ಯತೆ ಇದೆ.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ












Click it and Unblock the Notifications