• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕ ರಾಜ್ಯೋತ್ಸವ: ಎಲ್ಲಡೆ ಮೊಳಗಿತು ಕನ್ನಡ ಡಿಂಡಿಮ

|
Google Oneindia Kannada News

ಬೆಂಗಳೂರು, ನವೆಂಬರ್ 1: 1947ರಲ್ಲಿ ಭಾರತ ದೇಶ ಸ್ವತಂತ್ರಗೊಂಡು 1950ರಲ್ಲಿ ಸಂವಿಧಾನ ಜಾರಿ ಆದ ಬಳಿಕ, ಭಾಷಾವಾರು ರಾಜ್ಯ ಮರು ವಿಂಗಡಣೆ ಕಾಯ್ದೆಯಂತೆ 1956ರಲ್ಲಿ ಕರ್ನಾಟಕ ರಾಜ್ಯದ ರಚನೆ ಆಯಿತು. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ. ಈ ಬಾರಿ ಕೋವಿಡ್ ಕಾರಣದಿಂದ ಸರಳವಾಗಿ ಕನ್ನಡ ರಾಜೋತ್ಸವ ಆಚರಿಸಲಾಗುತ್ತಿದೆ.

ಬೆಂಗಳೂರು ವರದಿ:

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಇವರ ವತಿಯಿಂದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ 65ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ದರು.

ಕುಂದಾನಗರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: ಎಂಇಎಸ್ಗೆ ಮುಖಭಂಗಕುಂದಾನಗರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: ಎಂಇಎಸ್ಗೆ ಮುಖಭಂಗ

ಚಿಕ್ಕಮಗಳೂರು ವರದಿ:

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಚಿಕ್ಕಮಗಳೂರು ನಗರದ ಸುಭಾಷ್ ಚಂದ್ರ ಬೋಸ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಮೂಲಕ ನೆರವೇರಿಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಧ್ವಜವಂದನೆ ಸ್ವೀಕರಿಸಿದರು. ಪೊಲೀಸ್ ಇಲಾಖೆ, ಅಗ್ನಿ ಶಾಮಕದಳ, ಅರಣ್ಯ ಇಲಾಖೆ, ಹೋಂ ಗಾರ್ಡ್ ಗಳಿಂದ ಪಥಸಂಚಲನ ನಡೆಯಿತು. ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಸೇರಿ ಹಲವರು ಭಾಗಿಯಾಗಿದ್ದು, ಕೊರೊನಾ ಹಿನ್ನೆಲೆ ಸರಳ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲಾಯಿತು.

ಚಿಕ್ಕಬಳ್ಳಾಪುರ ವರದಿ:

ಅರವತ್ತೈದನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಾನ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಧ್ವಜಾರೋಹಣ ನೆರವೇರಿಸಿ ಪೋಲಿಸ್ ಸಿಬ್ಬಂದಿಯ ಗೌರವ ವಂದನೆ ಸ್ವೀಕರಿಸಿದರು.

ಬಳ್ಳಾರಿಯ ಏಕಶಿಲಾ ಬೆಟ್ಟದಲ್ಲಿ ಬಾನೆತ್ತರಕ್ಕೆ ಹಾರಿದ 65 ಅಡಿ ಉದ್ದದ ಕನ್ನಡ ಧ್ವಜಬಳ್ಳಾರಿಯ ಏಕಶಿಲಾ ಬೆಟ್ಟದಲ್ಲಿ ಬಾನೆತ್ತರಕ್ಕೆ ಹಾರಿದ 65 ಅಡಿ ಉದ್ದದ ಕನ್ನಡ ಧ್ವಜ

ದೇವನಹಳ್ಳಿಯಲ್ಲಿ ಕಂದಾಯ ಸಚಿವ ಆರ್.ಅಶೋಕ ಅವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು.

ಬೆಳಗಾವಿ ವರದಿ:

ಕುಂದಾನಗರಿಯಲ್ಲಿ 65ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಬೆಳಗಾವಿಯ ಸಿ.ಪಿ.ಎಡ್ ಮೈದಾನದಲ್ಲಿ ಜಿಲ್ಲಾಡಳಿತದಿಂದ ರಾಜ್ಯೋತ್ಸವ ಆಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಯಿಂದ ಭುವನೇಶ್ವರಿ ದೇವಿಗೆ ನಮನ ಸಲ್ಲಿಸಲಾಯಿತು. ಬಳಿಕ ಧ್ವಜಾರೋಹಣ ನೆರವೇರಿಸಿದ ಸಚಿವ ರಮೇಶ್ ಜಾರಕಿಹೊಳಿ ಅವರು. ವಿವಿಧ ಪಥಸಂಚಲಗಳ ವೀಕ್ಷಣೆ ಮಾಡಿದರು.

English summary
Karnataka Rajyotsava is celebrated on November 1 every year. This time the Kannada Rajyotsava is being celebrated simply because of Covid-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X